ದೇಶ

ಎನ್ ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ: ದ್ರೌಪದಿ ಮುರ್ಮು ಇಂದು ನಾಮಪತ್ರ ಸಲ್ಲಿಕೆ

ಮುಂದಿನ ತಿಂಗಳು ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಒಡಿಶಾ ಮೂಲದ ದ್ರೌಪದಿ ಮುರ್ಮು ಇಂದು ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಎನ್ ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ: ದ್ರೌಪದಿ ಮುರ್ಮು ಇಂದು ನಾಮಪತ್ರ ಸಲ್ಲಿಕೆ
ದ್ರೌಪದಿ ಮುರ್ಮು
Published On :

ನವದೆಹಲಿ: ಮುಂದಿನ ತಿಂಗಳು ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಒಡಿಶಾ ಮೂಲದ ದ್ರೌಪದಿ ಮುರ್ಮು ಇಂದು ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಚುನಾವಣಾಧಿಕಾರಿಗಳ ಮುಂದೆ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಎನ್ ಡಿ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ನಿನ್ನೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ರಾಷ್ಟ್ರಪತಿ ಹುದ್ದೆಗೆ ದ್ರೌಪದಿ ಮುರ್ಮು ಅವರ ಉಮೇದುವಾರಿಕೆಯ ದೇಶಾದ್ಯಂತ ಜನರು ವಿವಿಧ ರೀತಿಯಲ್ಲಿ ಚರ್ಚೆ ನಡೆಸುತ್ತಿದ್ದಾರೆ. 

ನಿನ್ನೆ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ, ಇಂದು ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದೆ. ಅವರ ಉಮೇದುವಾರಿಕೆಯ ಬಗ್ಗೆ ಭಾರತದಾದ್ಯಂತ ಸಮಾಜದ ಎಲ್ಲಾ ವರ್ಗಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತಳಮಟ್ಟದ ಸಮಸ್ಯೆಗಳ ಬಗ್ಗೆ ಅವರ ತಿಳುವಳಿಕೆ ಮತ್ತು ಭಾರತದ ಅಭಿವೃದ್ಧಿಯ ದೃಷ್ಟಿಕೋನ ಅತ್ಯುತ್ತಮವಾಗಿದೆ ಎಂದು ಹೇಳಿದ್ದಾರೆ.

ದ್ರೌಪದಿ ಮುರ್ಮು ಅವರು ರಾಷ್ಟ್ರಪತಿಯಾಗಿ ಆಯ್ಕೆಯಾದರೆ ದೇಶದ ಬುಡಕಟ್ಟು ಜನಾಂಗದ ಮೊದಲ ಮಹಿಳಾ ರಾಷ್ಟ್ರಪತಿ ಹಾಗೂ ದೇಶದ ಎರಡನೇ ಮಹಿಳಾ ರಾಷ್ಟ್ರಪತಿ ಎನಿಸಿಕೊಳ್ಳಲಿದ್ದಾರೆ. ಈ ಮೊದಲು ಯುಪಿಎ ಮೈತ್ರಿಕೂಟದ ಸರ್ಕಾರವಿದ್ದಾಗ ಪ್ರತಿಭಾ ಪಾಟೀಲ್ ರಾಷ್ಟ್ರಪತಿಯಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.