ರಾಷ್ಟ್ರಪತಿ ಚುನಾವಣೆ: ಎನ್ ಡಿ ಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಜಗನ್ ಮೋಹನ್ ರೆಡ್ಡಿ ಬೆಂಬಲ
ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಹೈದರಾಬಾದ್: ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ಸೂಚಿಸಿದ್ದಾರೆ. ಈ ಚುನಾವಣೆಯಲ್ಲಿ ಗೆದ್ದರೆ ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸುವ ಮೊದಲ ಬುಡಕಟ್ಟು ಮಹಿಳೆ ಎಂಬ ಖ್ಯಾತಿಗೆ ಅವರು ಒಳಗಾಗಲಿದ್ದಾರೆ.
ರಾಜ್ಯ ಸರ್ಕಾರದ ಅಧಿಕೃತ ಹೇಳಿಕೆ ಪ್ರಕಾರ, ಎಸ್ ಸಿ, ಎಸ್ ಟಿ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಪ್ರಾತಿನಿಧ್ಯಕ್ಕೆ ಅವರು ಯಾವಾಗಲೂ ನೀಡುತ್ತಿರುವ ಪ್ರಾಮುಖ್ಯತೆಗೆ ಅನುಗುಣವಾಗಿ ಈ ಗೌರವ ಬಂದಿದೆ ಎಂದು ಜಗನ್ ನಂಬಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಜಗನ್ ಕೂಡಾ ಈ ಸಮುದಾಯಗಳ ಉನ್ನತಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದ್ದಾರೆ. ಈ ಹಿಂದೆ ನಿಗದಿಯಾಗಿದ್ದ ಸಂಪುಟ ಸಭೆಯಿಂದಾಗಿ ದ್ರೌಪದಿ ಮುರ್ಮು ಅವರ ನಾಮಪತ್ರ ಸಲ್ಲಿಕೆಗೆ ಜಗನ್ ಮೋಹನ್ ರೆಡ್ಡಿ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಬದಲಿಗೆ ರಾಜ್ಯಸಭಾ ಸದಸ್ಯ ವಿಜಯಸಾಯಿ ರೆಡ್ಡಿ ಹಾಗೂ ಲೋಕಸಭಾ ಸದಸ್ಯ ಮಿಥುನ್ ರೆಡ್ಡಿ ಹಾಜರಾಗಲಿದ್ದಾರೆ. ಜುಲೈ 18 ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


