ಗುಪ್ತಚರ ಇಲಾಖೆ ಮುಖ್ಯಸ್ಥರಾಗಿ ತಪನ್ ಕುಮಾರ್ ದೇಕಾ ನೇಮಕ; ರಾ ಮುಖ್ಯಸ್ಥ ಗೋಯಲ್ ಅಧಿಕಾರಾವಧಿ 1 ವರ್ಷ ವಿಸ್ತರಣೆ!
ಹಿರಿಯ ಐಪಿಎಸ್ ಅಧಿಕಾರಿ ತಪನ್ ಕುಮಾರ್ ದೇಕಾ ಅವರನ್ನು ಗುಪ್ತಚರ ಸಂಸ್ಥೆ (ಐಬಿ) ಮುಖ್ಯಸ್ಥರನ್ನಾಗಿ ಶುಕ್ರವಾರ ನೇಮಿಸಲಾಗಿದ್ದು, ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ (ರಾ) ಮುಖ್ಯಸ್ಥ ಸಮಂತ್ ಕುಮಾರ್ ಗೋಯೆಲ್ ಅವರಿಗೆ ಒಂದು ವರ್ಷದ ಸೇವಾ ಅವಧಿ ವಿಸ್ತರಣೆಯಾಗಿದೆ.

ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ತಪನ್ ಕುಮಾರ್ ದೇಕಾ ಅವರನ್ನು ಗುಪ್ತಚರ ಸಂಸ್ಥೆ (ಐಬಿ) ಮುಖ್ಯಸ್ಥರನ್ನಾಗಿ ಶುಕ್ರವಾರ ನೇಮಿಸಲಾಗಿದ್ದು, ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ (ರಾ) ಮುಖ್ಯಸ್ಥ ಸಮಂತ್ ಕುಮಾರ್ ಗೋಯೆಲ್ ಅವರಿಗೆ ಒಂದು ವರ್ಷದ ಸೇವಾ ಅವಧಿ ವಿಸ್ತರಣೆಯಾಗಿದೆ.
1988 ರ ಬ್ಯಾಚ್ ಹಿಮಾಚಲ ಪ್ರದೇಶ ಕೇಡರ್ ಅಧಿಕಾರಿ ಮತ್ತು ಈಶಾನ್ಯ ವ್ಯವಹಾರಗಳ ಪರಿಣಿತರಾದ ತಪನ್ ಕುಮಾರ್ ದೇಕಾ ಪ್ರಸ್ತುತ ಗುಪ್ತಚರ ಇಲಾಖೆಯ ಕಾರ್ಯಾಚರಣೆಯ ವಿಭಾಗದ ಮುಖ್ಯಸ್ಥರಾಗಿದ್ದು, ಕಳೆದ ಎರಡು ದಶಕಗಳಿಂದ ಭಯೋತ್ಪಾದಕರು ಮತ್ತು ಧಾರ್ಮಿಕ ಮೂಲಭೂತವಾದವನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.
ಈ ಕುರಿತು ಕ್ಯಾಬಿನೆಟ್‌ನ ನೇಮಕಾತಿ ಸಮಿತಿಯ ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದ್ದು, 'ಸಚಿವ ಸಂಪುಟದ ನೇಮಕಾತಿ ಸಮಿತಿಯು 30.06.2022 ರಂದು ಎರಡು ವರ್ಷಗಳ ಅವಧಿಗೆ ಅವರ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರ, ಗುಪ್ತಚರ ಬ್ಯೂರೋದ ವಿಶೇಷ ನಿರ್ದೇಶಕರಾದ ತಪನ್ ಕುಮಾರ್ ದೇಕಾ ಅವರನ್ನು ಇಂಟೆಲಿಜೆನ್ಸ್ ಬ್ಯೂರೋ ನಿರ್ದೇಶರಾಗಿ ಮತ್ತು ಉಪ ನಿರ್ದೇಶಕರಾಗಿ ಅರವಿಂದ ಕುಮಾರ್ IPS ಅವರನ್ನು ನೇಮಕ ಮಾಡಲು ಅನುಮೋದನೆ ನೀಡಿದೆ ಎಂದು ತಿಳಿಸಿದೆ.
ಇನ್ನು ಪಂಜಾಬ್ ಕೇಡರ್‌ನ 1984 ರ ಬ್ಯಾಚ್ IPS ಅಧಿಕಾರಿ ಮತ್ತು ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ (ರಾ) (RAW) ಮುಖ್ಯಸ್ಥ ಸಮಂತ್ ಕುಮಾರ್ ಗೋಯೆಲ್ ಅವರ ಸೇವಾವಧಿಯನ್ನು ಒಂದು ವರ್ಷ ವಿಸ್ತರಣೆ ಮಾಡಲಾಗಿದ್ದು, ಇದು ಅವರ ಎರಡನೇ ವಿಸ್ತರಣೆಯಾಗಿದೆ.
"ಸಮಂತ್ ಕುಮಾರ್ ಗೋಯೆಲ್, IPS (PB:84) ಅವರ ಪ್ರಸ್ತುತ ಅಧಿಕಾರಾವಧಿಯನ್ನು ಮೀರಿ ಒಂದು ವರ್ಷದ ಅವಧಿಗೆ ಅಂದರೆ 30.06.2023 ರವರೆಗೆ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ ಕಾರ್ಯದರ್ಶಿಯಾಗಿ ಸೇವೆಯ ವಿಸ್ತರಣೆಯನ್ನು ಸಂಪುಟದ ನೇಮಕಾತಿ ಸಮಿತಿಯು ಅನುಮೋದಿಸಿದೆ" ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


