ಶಾಲೆಗೆ ತಡವಾಗಿ ಬಂದ ಶಿಕ್ಷಕಿಗೆ ಬೂಟಿನಿಂದ ಹೊಡೆದ ಪ್ರಾಂಶುಪಾಲ; ವಿಡಿಯೋ ವೈರಲ್
ಶಾಲೆಗೆ ತಡವಾಗಿ ಬಂದ ಶಿಕ್ಷಕಿಗೆ ಪ್ರಾಂಶುಪಾಲರೊಬ್ಬರು ಬೂಟಿನಿಂದ ಹೊಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಲಖಿಂಪುರ ಖೇರಿ: ಶಾಲೆಗೆ ತಡವಾಗಿ ಬಂದ ಶಿಕ್ಷಕಿಗೆ ಪ್ರಾಂಶುಪಾಲರೊಬ್ಬರು ಬೂಟಿನಿಂದ ಹೊಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.
ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಮಹಂಗು ಖೇರಾ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿ ಶಾಲೆಗೆ 10 ನಿಮಿಷ ತಡವಾಗಿ ಬಂದಿದ್ದಕ್ಕೆ ಪ್ರಾಂಶುಪಾಲ ಶಿಕ್ಷಕಿಗೆ ಬೂಟಿನಿಂದ ಹೊಡೆದಿದ್ದಾರೆ. ಈ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಶಿಕ್ಷಕಿ ಶಾಲೆಗೆ ತಡವಾಗಿ ಬಂದಿದ್ದರಿಂದ ಕುಪಿತಗೊಂಡ ಪ್ರಾಂಶುಪಾಲ ಮೊದಲು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ವೇಳೆ ಶಿಕ್ಷಕಿ ಮತ್ತು ಪ್ರಾಂಶುಪಾಲನ ನಡುವೆ ವಾಗ್ವಾದ ನಡೆದಿದ್ದು ನೋಡನೋಡುತ್ತಲೇ ಪ್ರಾಂಶುಪಾಲ ಶೂಗಳಿಂದ ಅವರನ್ನು ಥಳಿಸಿದ್ದಾರೆ. 20 ಸೆಕೆಂಡುಗಳ ಈ ವಿಡಿಯೊವನ್ನು ಎಎನ್ಐ ಸುದ್ದಿಸಂಸ್ಥೆ ಹಂಚಿಕೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೊವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ.
ಈ ಘಟನೆ ಕುರಿತು ಪ್ರಾಂಶಪಾಲರ ಮೇಲೆ ಶಿಕ್ಷಕಿ ಸ್ಥಳೀಯ ಠಾಣೆಗೆ ದೂರು ನೀಡಿದ್ದು, ಸದ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಾಂಶುಪಾಲನನ್ನು ಸೇವೆಯಿಂದ ಅಮಾನತು ಮಾಡಿ ತನಿಖೆಗೆ ಆದೇಶಿಸಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


