ದೇಶ

4 ವರ್ಷಗಳಲ್ಲಿ ರೈಲ್ವೆ ಇಲಾಖೆಯ 92,000 ಕ್ಕೂ ಹೆಚ್ಚು ಉದ್ಯೋಗಗಳು ರದ್ದು!

ದೇಶಾದ್ಯಂತ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ವಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವಾಗಲೇ ದೇಶದ ಅತಿ ದೊಡ್ಡ ಉದ್ಯೋಗದಾತ ಸಂಸ್ಥೆ ರೈಲ್ವೆ ಕಳೆದ 4 ವರ್ಷಗಳಲ್ಲಿ 92, 000 ಕ್ಕೂ ಹೆಚ್ಚು ಉದ್ಯೋಗಗಳನ್ನು ರದ್ದುಗೊಳಿಸಿದೆ.

4 ವರ್ಷಗಳಲ್ಲಿ ರೈಲ್ವೆ ಇಲಾಖೆಯ 92,000 ಕ್ಕೂ ಹೆಚ್ಚು ಉದ್ಯೋಗಗಳು ರದ್ದು!
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶಾದ್ಯಂತ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ವಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವಾಗಲೇ ದೇಶದ ಅತಿ ದೊಡ್ಡ ಉದ್ಯೋಗದಾತ ಸಂಸ್ಥೆ ರೈಲ್ವೆ ಕಳೆದ 4 ವರ್ಷಗಳಲ್ಲಿ 92, 000 ಕ್ಕೂ ಹೆಚ್ಚು ಉದ್ಯೋಗಗಳನ್ನು ರದ್ದುಗೊಳಿಸಿದೆ.
  
2018-19, 2021-22 ನೇ ಸಾಲಿನಲ್ಲಿ ವಿವಿಧ ಶ್ರೇಣಿ, ವಿಭಾಗಗಳಲ್ಲಿ ರೈಲ್ವೆ ಇಲಾಖೆ 92,000 ಹುದ್ದೆಗಳನ್ನು ರದ್ದುಗೊಳಿಸಿದ್ದರೂ ರೈಲ್ವೆಯಲ್ಲಿ ಇನ್ನೂ 2.98 ಲಕ್ಷ ಖಾಲಿ ಹುದ್ದೆಗಳಿವೆ ಎಂಬುದು ಗಮನಾರ್ಹ ಸಂಗತಿ. ಕೆಲಸದ ಹೊರೆಯ ಆಧಾರದಲ್ಲಿ ಕೆಲವು ಹುದ್ದೆಗಳನ್ನು ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಸಮರ್ಥನೆ ನೀಡಿದ್ದು, 2019-20 ನೇ ಆರ್ಥಿಕ ವರ್ಷದಲ್ಲಿ ಎಲ್ಲಾ 17 ಝೋನ್ ಗಳಲ್ಲಿಯೂ ಅತಿ ಹೆಚ್ಚು ಅಂದರೆ 31,275 ಹುದ್ದೆಗಳನ್ನು ತೆಗೆದುಹಾಕಲಾಗಿದೆ ಎಂದು ಮಾಹಿತಿ ನೀಡಿದೆ. 

ಈ ಆರ್ಥಿಕ ವರ್ಷಗಳಲ್ಲಿ ಬೇರೆ ವಿಭಾಗಗಳಿಗೆ ಹೋಲಿಕೆ ಮಾಡಿದರೆ, ಇಜಾತ್ ನಗರ್ ವಿಭಾಗ 1,430 ಹುದ್ದೆಗಳನ್ನು ರದ್ದುಗೊಳಿಸಿದ್ದರೆ, ಎರಡನೇ ಸ್ಥಾನದಲ್ಲಿ ವಾರಣಾಸಿ ವಿಭಾಗ, ನಂತರದಲ್ಲಿ 1,151 ಹುದ್ದೆಗಳನ್ನು ರದ್ದುಗೊಳಿಸಿರುವ ಲಖನೌ ವಿಭಾಗವಿದೆ. 

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕಳೆದ ಸಂಸತ್ ಅಧಿವೇಶನದಲ್ಲಿ ರೈಲ್ವೆ ಇಲಾಖೆ 92,000 ಹುದ್ದೆಗಳನ್ನು ರದ್ದುಗೊಳಿಸಿದ್ದನ್ನು ಒಪ್ಪಿಕೊಂಡಿದ್ದರು. 2018-19 ರಲ್ಲಿ ಈಶಾನ್ಯ ವಲಯದಿಂದ 3,296 ಹುದ್ದೆಗಳು, ಉತ್ತರ ರೈಲ್ವೆಯಲ್ಲಿ 3,221, ಪೂರ್ವ ಕೇಂದ್ರದಲ್ಲಿ 1,735 ಹುದ್ದೆಗಳು, 1,514 ಹುದ್ದೆಗಳು  ಪಶ್ಚಿಮ ರೈಲ್ವೆಯಲ್ಲಿ ರದ್ದುಗೊಂಡಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.