ದೇಶ

ಬಹುಮತ ಸಾಬೀತುಪಡಿಸುವಂತೆ ಉದ್ಧವ್ ಠಾಕ್ರೆಗೆ ಸೂಚಿಸಿ: ಮಾಹಾರಾಷ್ಟ್ರ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ

ಮಹಾರಾಷ್ಟ್ರ ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರನ್ನೊಳಗೊಂಡ ಬಿಜೆಪಿ ನಾಯಕರ ನಿಯೋಗ ಮಂಗಳವಾರ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿ, ಎಂವಿಎ ಸರ್ಕಾರ ಬಹುಮತ...

ಬಹುಮತ ಸಾಬೀತುಪಡಿಸುವಂತೆ ಉದ್ಧವ್ ಠಾಕ್ರೆಗೆ ಸೂಚಿಸಿ: ಮಾಹಾರಾಷ್ಟ್ರ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ
ದೇವೇಂದ್ರ ಫಡ್ನವಿಸ್ - ಭಗತ್ ಸಿಂಗ್ ಕೋಶ್ಯಾರಿ
Published On :

ಮುಂಬೈ: ಮಹಾರಾಷ್ಟ್ರ ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರನ್ನೊಳಗೊಂಡ ಬಿಜೆಪಿ ನಾಯಕರ ನಿಯೋಗ ಮಂಗಳವಾರ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿ, ಎಂವಿಎ ಸರ್ಕಾರ ಬಹುಮತ ಕಳೆದುಕೊಂಡಿದ್ದು ವಿಶ್ವಾಸಮತಯಾಚಿಸುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಸೂಚಿಸಬೇಕು ಎಂದು ಮನವಿ ಮಾಡಿದೆ.

ದೇವೇಂದ್ರ ಫಡ್ನವಿಸ್, ಆಶಿಶ್ ಶೆಲಾರ್, ಪ್ರವೀಣ್ ದಾರೇಕರ್ ಅವರನ್ನು ಒಳಗೊಂಡ ಬಿಜೆಪಿ ನಿಯೋಗ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಬಹುಮತ ಕಳೆದುಕೊಂಡಿದ್ದು, ವಿಶೇಷ ಅಧಿವೇಶನ ಕರೆದು, ವಿಶ್ವಾಸಮತ ಯಾಚನೆ ಮಾಡುವಂತೆ ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ.

ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ  ದೇವೇಂದ್ರ ಫಡ್ನವಿಸ್ ಅವರು, ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳ ಪ್ರಕಾರ, ಶಿವಸೇನೆಯ 39 ಶಾಸಕರಿಗೆ ಮಹಾ ವಿಕಾಸ್ ಅಘಾಡಿ ಸರ್ಕಾರದ ಬಗ್ಗೆ ಅಸಮಾಧಾನ ಇದ್ದು, ಅವರು ಈ ಸರ್ಕಾರದಿಂದ ಹೊರಬಂದಿದ್ದಾರೆ ಎಂದು ತೋರುತ್ತದೆ. ಶಿವಸೇನಾ ಶಾಸಕರ ಈ ನಿರ್ಧಾರದ ನಂತರ, ಉದ್ಧವ್ ಠಾಕ್ರೆ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಅವರು ಸದನದಲ್ಲಿ ಬಹುಮತ ಸಾಬೀತುಪಡಿಸಬೇಕು ಎಂದು ಹೇಳಿದರು.

"ನಾವು ರಾಜ್ಯಪಾಲರನ್ನು ಭೇಟಿ ಮಾಡಿ ಮಹಾರಾಷ್ಟ್ರದ ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ಅವರಿಗೆ ತಿಳಿಸಿದ್ದೇವೆ. ಈಗ ಅವರು ನಿರ್ಧಾರ ತೆಗೆದುಕೊಳ್ಳಬೇಕು. ಸುಪ್ರೀಂ ಕೋರ್ಟ್ ನ ವಿವಿಧ ತೀರ್ಪಿನ ಪ್ರಕಾರ ಅವರು ವಿಶೇಷ ಅಧಿವೇಶನವನ್ನು ಕರೆಯಬಹುದು ಎಂದು ನಾವು ತಿಳಿಸಿದ್ದೇವೆ" ಎಂದು ಫಡ್ನವಿಸ್ ಹೇಳಿದ್ದಾರೆ.

ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆಯುವ ಕುರಿತು ರಾಜ್ಯಪಾಲರು ಕಾನೂನು ತಜ್ಞರ ಸಲಹೆ ಪಡೆದು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.