ಬಿಹಾರದಲ್ಲಿ ಓವೈಸಿಗೆ ಮುಖಭಂಗ: ಆರ್‌ಜೆಡಿ ಸೇರಿದ ಎಐಎಂಐಎಂನ ನಾಲ್ವರು ಶಾಸಕರು!
ಬಿಹಾರ ರಾಜಕೀಯದಲ್ಲಿ ಅಸಾದುದ್ದೀನ್ ಓವೈಸಿ ಪಕ್ಷಕ್ಕೆ ಭಾರೀ ಮುಖಭಂಗ ಉಂಟಾಗಿದೆ. ಐದು ಎಐಎಂಐಎಂ ಶಾಸಕರ ಪೈಕಿ ನಾಲ್ವರು ಆರ್‌ಜೆಡಿ ಸೇರ್ಪಡೆಯಾಗಿದ್ದಾರೆ.

ಪಾಟ್ನಾ: ಬಿಹಾರ ರಾಜಕೀಯದಲ್ಲಿ ಅಸಾದುದ್ದೀನ್ ಓವೈಸಿ ಪಕ್ಷಕ್ಕೆ ಭಾರೀ ಮುಖಭಂಗ ಉಂಟಾಗಿದೆ. ಐದು ಎಐಎಂಐಎಂ ಶಾಸಕರ ಪೈಕಿ ನಾಲ್ವರು ಆರ್‌ಜೆಡಿ ಸೇರ್ಪಡೆಯಾಗಿದ್ದಾರೆ.
ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರು ಓವೈಸಿ ಪಕ್ಷದ ನಾಲ್ವರು ಶಾಸಕರು ಆರ್‌ಜೆಡಿ ಸೇರಿರುವುದನ್ನು ಪುಷ್ಠಿಕರಿಸಿದ್ದಾರೆ.
ಈ ನಾಲ್ವರು ಶಾಸಕರ ಸೇರ್ಪಡೆಯಿಂದ ಬಿಹಾರದಲ್ಲಿ ಆರ್‌ಜೆಡಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆರ್ ಜೆಡಿಗೆ ಈ ನಾಲ್ವರು ಶಾಸಕರ ಆಗಮನದಿಂದ ಪಕ್ಷದ ಒಟ್ಟು ಸಂಖ್ಯೆ 79 ಆಗಲಿದೆ. ಇನ್ನು ಎರಡನೇ ಸ್ಥಾನದಲ್ಲಿ ಬಿಜೆಪಿ ಇರಲಿದ್ದು, ಅದರ ಒಟ್ಟು ಶಾಸಕರ ಸಂಖ್ಯೆ 77 ಇದೆ.
ಈ ಬೆಳವಣಿಗೆಗಳ ಮಧ್ಯೆ ವಿರೋಧ ಪಕ್ಷದ ನಾಯಕರಾಗಿರುವ ತೇಜಸ್ವಿ ಯಾದವ್ ಇಂದು ಸುದ್ದಿಗೋಷ್ಠಿ ನಡೆಸಲಿದ್ದು, ಮುಂದಿನ ರಣತಂತ್ರಗಳ ಬಗ್ಗೆ ಮಾಹಿತಿ ಬಿಚ್ಚಿಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


