ದೇಶ

'ಮಹಾ ಸಂಘರ್ಷ': 'ವಿಧಾನಸಭೆ ಅಧಿವೇಶನವೇ ಪರಿಹಾರ'; ಶಿವಸೇನೆ ಅರ್ಜಿ ವಿಚಾರಣೆ ಆರಂಭಿಸಿದ ಸುಪ್ರೀಂ ಕೋರ್ಟ್

ವಿಶ್ವಾಸ ಮತ ಯಾಚನೆಗೆ ಸೂಚನೆ ನೀಡಿರುವ ಮಹಾರಾಷ್ಟ್ರ ರಾಜ್ಯಪಾಲರ ನಿರ್ಧಾರದ ವಿರುದ್ಧ ಶಿವಸೇನೆ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ರಾಜಕೀಯ 'ಸಂಘರ್ಷ' ಇತ್ಯರ್ಥಕ್ಕೆ ವಿಧಾನಸಭೆ ಅಧಿವೇಶನವೇ ಪರಿಹಾರ ಎಂದು ಅಭಿಪ್ರಾಯಪಟ್ಟಿದೆ.

'ಮಹಾ ಸಂಘರ್ಷ': 'ವಿಧಾನಸಭೆ ಅಧಿವೇಶನವೇ ಪರಿಹಾರ'; ಶಿವಸೇನೆ ಅರ್ಜಿ ವಿಚಾರಣೆ ಆರಂಭಿಸಿದ ಸುಪ್ರೀಂ ಕೋರ್ಟ್
ಮಹಾ ಸಂಘರ್ಷ (ಸಂಗ್ರಹ ಚಿತ್ರ)
Published On :

ನವದೆಹಲಿ: ವಿಶ್ವಾಸ ಮತ ಯಾಚನೆಗೆ ಸೂಚನೆ ನೀಡಿರುವ ಮಹಾರಾಷ್ಟ್ರ ರಾಜ್ಯಪಾಲರ ನಿರ್ಧಾರದ ವಿರುದ್ಧ ಶಿವಸೇನೆ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ರಾಜಕೀಯ 'ಸಂಘರ್ಷ' ಇತ್ಯರ್ಥಕ್ಕೆ ವಿಧಾನಸಭೆ ಅಧಿವೇಶನವೇ ಪರಿಹಾರ ಎಂದು ಅಭಿಪ್ರಾಯಪಟ್ಟಿದೆ.

ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರಕ್ಕೆ ಗುರುವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸುವಂತೆ ಮಹಾರಾಷ್ಟ್ರ ರಾಜ್ಯಪಾಲರು ನೀಡಿದ ನಿರ್ದೇಶನವನ್ನು ಶಿವಸೇನೆಯ ಮುಖ್ಯ ಸಚೇತಕ ಸುನೀಲ್ ಪ್ರಭು ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.  ಈ ಕುರಿತ ಅರ್ಜಿ ವಿಚಾರಣೆಯನ್ನು ಇಂದು ಸಂಜೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ನ ರಜಾ ಕಾಲದ ಪೀಠದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೆ ಬಿ ಪರ್ದಿವಾಲಾ ಅವರು, 'ಪ್ರಜಾಪ್ರಭುತ್ವದ ಈ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ವಿಧಾನಸಭೆ ಅಧಿವೇಶನವೇ ಪರಿಹಾರ ಎಂದು ಅಭಿಪ್ರಾಯಪಟ್ಟಿದೆ.

ಶಿವಸೇನೆಯ ಮುಖ್ಯ ಸಚೇತಕ ಸುನೀಲ್ ಪ್ರಭು ಅವರು ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಕೆ ಮಾಡಿದ್ದು, ರಾಜ್ಯಪಾಲರು ಶಬ್ದಾತೀತ ವೇಗದಲ್ಲಿ ಓಡುವ ಕುದುರೆಯಂತೆ ನಿರ್ಧಾರ ಕೈಗೊಂಡಿದ್ದಾರೆ ಎಂದು ಟೀಕಿಸಿದ್ದಾರೆ. ಈ ಅರ್ಜಿಗೆ ಸಂಬಂಧಿಸಿದಂತೆ ಅರ್ಜಿದಾರ ಪ್ರಭು ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಶೇಕ್ ಮನು ಸಿಂಘ್ವಿ ಅವರು, 'ಎನ್‌ಸಿಪಿಯ ಇಬ್ಬರು ಶಾಸಕರು ಕೋವಿಡ್-19 ಸೋಂಕಿಗೆ ಒಳಗಾಗಿದ್ದು, ಕಾಂಗ್ರೆಸ್‌ನ ಇಬ್ಬರು ಶಾಸಕರು ವಿದೇಶದಲ್ಲಿದ್ದಾರೆ. ಅವರನ್ನು ಗುರುವಾರದಂದು ಮಹಜರು ಪರೀಕ್ಷೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ಫ್ಲೋರ್ ಟೆಸ್ಟ್‌ (ವಿಶ್ವಾಸ ಮತ ಯಾಚನೆ)ಗೆ ಅವಕಾಶ ನೀಡುವುದು ಎಂದರೆ ಸದನದ ನಡಾವಳಿಯ 10ನೇ ಶೆಡ್ಯೂಲ್ ಅನ್ನು ನಿಷ್ಕ್ರಿಯವಾಗಿಸುವಂತೆ ಎಂದು ಸಿಂಘ್ವಿ ವಾದ ಮಂಡಿಸಿದರು. ಪ್ರಸ್ತುತ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಹೀಗಾಗಿ ಶೆಡ್ಯೂಲ್ 10 ದೃಢವಾದ ನಿಬಂಧನೆಗಳಲ್ಲಿ ಒಂದಾಗಿದ್ದು ನ್ಯಾಯಾಲಯವು ಅದನ್ನು ಬಲಪಡಿಸಬೇಕು ಎಂದು ಅವರು ಪೀಠದ ಗಮನ ಸೆಳೆದರು.

ವಾದಗಳನ್ನು ಆಲಿಸಿದ ನ್ಯಾಯಪೀಠ, 'ಪ್ರಜಾಪ್ರಭುತ್ವದ ಈ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ವಿಧಾನಸಭೆ ಅಧಿವೇಶನವೊಂದೇ ಸೂಕ್ತವಾದ ಮಾರ್ಗ ಎಂಬುದು ನಮ್ಮ ತಿಳುವಳಿಕೆಯಾಗಿದೆ ಎಂದು ನ್ಯಾಯಾಲಯ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.