ದೇಶ

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿಗೆ ರಾಜೀನಾಮೆ ಸಲ್ಲಿಸಿದ ಉದ್ಧವ್ ಠಾಕ್ರೆ

ವಿಶ್ವಾಸಮತ ಯಾಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದ ಉದ್ಧವ್ ಠಾಕ್ರೆ ಅವರು ಬುಧವಾರ ರಾತ್ರಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿ...

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿಗೆ ರಾಜೀನಾಮೆ ಸಲ್ಲಿಸಿದ ಉದ್ಧವ್ ಠಾಕ್ರೆ
ಭಗತ್ ಸಿಂಗ್ ಕೋಶ್ಯಾರಿಗೆ ರಾಜೀನಾಮೆ ಸಲ್ಲಿಸಿದ ಉದ್ಧವ್ ಠಾಕ್ರೆ
Published On :

ಮುಂಬೈ: ವಿಶ್ವಾಸಮತ ಯಾಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದ ಉದ್ಧವ್ ಠಾಕ್ರೆ ಅವರು ಬುಧವಾರ ರಾತ್ರಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ. 

ಇಂದು ರಾತ್ರಿ ರಾಜಭವನಕ್ಕೆ ತೆರಳಿದ ಉದ್ಧವ್ ಠಾಕ್ರೆ ಅವರು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ರಾಜೀನಾಮೆಯನ್ನು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅಂಗೀಕರಿಸಿದ್ದಾರೆ. ಪರ್ಯಾಯ ವ್ಯವಸ್ಥೆ ಮಾಡುವವರೆಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ಅವರು ಕೇಳಿಕೊಂಡಿದ್ದಾರೆ ಎಂದು ರಾಜಭವನ ತಿಳಿಸಿದೆ.

ವಿಶ್ವಾಸಮತ ಯಾಚಿಸುವಂತೆ ಸೂಚನೆ ನೀಡಿರುವ ಮಹಾರಾಷ್ಟ್ರ ರಾಜ್ಯಪಾಲರ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಕೆಲವೇ ಕ್ಷಣಗಳಲ್ಲಿ ಫೇಸ್‌ಬುಕ್ ಲೈವ್‌ ಬಂದ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತು ವಿಧಾನ ಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.