ಆಂಧ್ರ ಪ್ರದೇಶ: ಆಟೋ ಮೇಲೆ ಹೈ ಟೆನ್ಶನ್ ವೈರ್ ಬಿದ್ದು 8 ಮಂದಿ ಕಾರ್ಮಿಕರು ಸಜೀವ ದಹನ
ಚಲಿಸುತ್ತಿದ್ದ ಆಟೋ ಮೇಲೆ ಹೈ ಟೆನ್ಷನ್ ವೈರ್ ಬಿದ್ದ ಪರಿಣಾಮ 8 ಮಂದಿ ಕೂಲಿ ಕಾರ್ಮಿಕರು ಸಜೀವವಾಗಿ ದಹನವಾಗಿರೋ ಭೀಕರ ಘಟನೆ ಆಂಧ್ರ ಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ.

ಶ್ರೀ ಸತ್ಯಸಾಯಿ: ಚಲಿಸುತ್ತಿದ್ದ ಆಟೋ ಮೇಲೆ ಹೈ ಟೆನ್ಷನ್ ವೈರ್ ಬಿದ್ದ ಪರಿಣಾಮ 8 ಮಂದಿ ಕೂಲಿ ಕಾರ್ಮಿಕರು ಸಜೀವವಾಗಿ ದಹನವಾಗಿರೋ ಭೀಕರ ಘಟನೆ ಆಂಧ್ರ ಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ತಾಡಿಮರ್ರಿ ವಲಯದ ಚಿಲ್ಲಕೊಂಡಯ್ಯಪಲ್ಲಿಯಲ್ಲಿ ಆಟೋ ಮೇಲೆ ಹೈ ಟೆನ್ಶನ್ ವಿದ್ಯುತ್ ತಂತಿ ಬಿದ್ದಿದ್ದು, ಆಟೋದಲ್ಲಿದ್ದ 8 ಮಂದಿಯೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಮೃತರನ್ನು ಗುಡ್ಡಂಪಲ್ಲಿ ನಿವಾಸಿಗಳು ಎಂದು ಗುರುತಿಸಲಾಗಿದ್ದು, ತಾಡಿಮರ್ರಿ ಮಂಡಲದ ಬುಡ್ಡಪಲ್ಲಿ ಗ್ರಾಮದ ಕೂಲಿ ಕಾರ್ಮಿಕರನ್ನು ಕೃಷಿ ಕೆಲಸಕ್ಕೆಂದು ಆಟೋದಲ್ಲಿ ಚಿಲ್ಲಕೊಂಡಯ್ಯಪಲ್ಲಿ ಕರೆಕೊಂಡು ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಅವಘಡ ನಡೆದ ಸಂದರ್ಭದಲ್ಲಿ ಆಟೋದಲ್ಲಿ 10ಕ್ಕೂ ಹೆಚ್ಚು ಜನರಿದ್ದರು ಎನ್ನಲಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹಲವು ದಿನಗಳಿಂದ ವಿದ್ಯುತ್ ಇಲಾಖೆ ಅಧಿಕಾರಿಗಳಿಗೆ ಹೈ ಟೆನ್ಶನ್ ವೈರ್ಗಳು ಜೋತು ಬಿದ್ದಿದ್ದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಅವಘಡ ಸಂಭವಿಸಿದೆ ಎಂದು ಆರೋಪಿಸಲಾಗುತ್ತಿದೆ.
ಸ್ಥಳೀಯರು ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


