ಕ್ಲೈಮ್ಯಾಕ್ಸ್ ಘಟ್ಟಕ್ಕೆ 'ಮಹಾ' ರಾಜಕೀಯ: ಬಂಡಾಯ ನಾಯಕ ಏಕನಾಥ್ ಶಿಂಧೆ ಬಣ ಮುಂಬೈಗೆ ಆಗಮನ, ಕೆಲವೇ ಕ್ಷಣಗಳಲ್ಲಿ ರಾಜ್ಯಪಾಲರ ಭೇಟಿ
ಮಹಾರಾಷ್ಟ್ರ ರಾಜಕೀಯ ಪ್ರಹಸನ ಕ್ಲೈಮ್ಯಾಕ್ಸ್ ಘಟ್ಟಕ್ಕೆ ಬಂದು ನಿಂತಿದೆ. ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಗೋವಾದಿಂದ ಮುಂಬೈಗೆ ಬಂದಿಳಿದಿದ್ದು, ಅವರು ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಹಾಗೂ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಕೆಲವೇ ಕ್ಷಣಗಳಲ್ಲಿ ಭೇಟಿಯಾಗಲಿದ್ದಾರೆ.

ಮುಂಬೈ: ಮಹಾರಾಷ್ಟ್ರ ರಾಜಕೀಯ ಪ್ರಹಸನ ಕ್ಲೈಮ್ಯಾಕ್ಸ್ ಘಟ್ಟಕ್ಕೆ ಬಂದು ನಿಂತಿದೆ. ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಗೋವಾದಿಂದ ಮುಂಬೈಗೆ ಬಂದಿಳಿದಿದ್ದು, ಅವರು ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಹಾಗೂ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಕೆಲವೇ ಕ್ಷಣಗಳಲ್ಲಿ ಭೇಟಿಯಾಗಲಿದ್ದಾರೆ.
ಫಡ್ನವೀಸ್ ನೇತೃತ್ವದ ಬಿಜೆಪಿ ಸರ್ಕಾರದ ರಚನೆಗೆ ತನ್ನ ಗುಂಪಿನ ಶಾಸಕರ ಬೆಂಬಲದ ಪತ್ರವನ್ನು ನೀಡಲಿದ್ದು, ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಅಪರಾಹ್ನ 3-30ಕ್ಕೆ ರಾಜಭವನಕ್ಕೆ ತೆರಳಲಿರುವ ಏಕನಾಥ್ ಶಿಂಧೆ, ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.
ಶಾಸಕರ ಕೊರತೆಯಿಂದಾಗಿ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದರಿಂದ ಏಕನಾಥ್ ಶಿಂಧೆ ವಿಶ್ವಾಸಮತ ಯಾಚನೆ ವೇಳೆಯಲ್ಲಿ ಬಹುಮತ ಸಾಬೀತುಪಡಿಸುವ ವಿಶ್ವಾಸದಲ್ಲಿದೆ. ತದನಂತರ ಬಿಜೆಪಿಯ ದೇವೇಂದ್ರ ಫಡ್ನವೀಸ್ ಏಕನಾಥ್ ಶಿಂಧೆ ಬೆಂಬಲದೊಂದಿಗೆ ಮುಖ್ಯಸ್ಥಾನ ಸ್ಥಾನ ವಹಿಸಿಕೊಳ್ಳುವ ಸಾಧ್ಯತೆಯಿದೆ.
ಖಾತೆ ಹಂಚಿಕೆ ಸಂಬಂಧ ಬಿಜೆಪಿಯೊಂದಿಗೆ ಯಾವುದೇ ಚರ್ಚೆ ನಡೆದಿಲ್ಲ. ಆದರೆ, ಶೀಘ್ರದಲ್ಲಿಯೇ ಮಾತುಕತೆ ನಡೆಯಲಿದೆ ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


