ದೇಶ

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: 2024 ರ ಲೋಕಸಭಾ ಚುನಾವಣೆಯ ದಿಕ್ಸೂಚಿ- ಪ್ರಧಾನಿ ನರೇಂದ್ರ ಮೋದಿ

ಇಂದು ಪ್ರಕಟವಾಗಿರುವ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ 2024ರ ಲೋಕಸಭಾ ಚುನಾವಣೆಯ ದಿಕ್ಸೂಚಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: 2024 ರ ಲೋಕಸಭಾ ಚುನಾವಣೆಯ ದಿಕ್ಸೂಚಿ- ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Published On :

ನವದೆಹಲಿ: ಇಂದು ಪ್ರಕಟವಾಗಿರುವ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ  2024ರ ಲೋಕಸಭಾ ಚುನಾವಣೆಯ ದಿಕ್ಸೂಚಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಉತ್ತರ ಪ್ರದೇಶ, ಗೋವಾ, ಮಣಿಪುರ ಮತ್ತು ಉತ್ತರಾಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿರುವ ಹಿನ್ನೆಲೆಯಲ್ಲಿ  ಬಿಜೆಪಿ ಕೇಂದ್ರ ಕಚೇರಿಯಲ್ಲಿ ನೆರೆದಿದ್ದ ಬೃಹತ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮೋದಿ, ಉತ್ತರ ಪ್ರದೇಶದಲ್ಲಿ 2017ರಲ್ಲಿ ಗೆಲುವು ಸಾಧಿಸಿದ್ದರಿಂದ 2019ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಯಿತು ಎಂದು ತಜ್ಞರು ಹೇಳಿದ್ದರು. 2022ರ ಚುನಾವಣೆ 2024ರ ಲೋಕಸಭಾ ಚುನಾವಣೆಯನ್ನು ನಿರ್ಧರಿಸಲಿದೆ ಎಂದು ಅದೇ ತಜ್ಞರು ಹೇಳುವ ವಿಶ್ವಾಸವಿದೆ ಎಂದರು.

ಪಂಜಾಬಿನಲ್ಲಿಯೂ ಪಕ್ಷ ಬೆಳವಣಿಗೆಯಾಗುತ್ತಿರುವುದನ್ನು ನೋಡುತ್ತಿದ್ದೇನೆ. ಅಲ್ಲಿನ ಎಲ್ಲಾ ಬಿಜೆಪಿ ಕಾರ್ಯಕರ್ತರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಪಂಜಾಬಿನಲ್ಲಿ ಈ ರೀತಿಯಲ್ಲಿ ಬಿಜೆಪಿಯನ್ನು ಮುಂದಕ್ಕೆ ತಂದಿರುವುದು ಶ್ಲಾಘನೀಯವಾಗಿದೆ. ಮುಂಬರುವ ವರ್ಷಗಳಲ್ಲಿ  ಬಿಜೆಪಿ ಬೆಳವಣಿಗೆಯನ್ನು ಅಲ್ಲಿಯೂ ನೋಡುವುದಾಗಿ ಹೇಳಿದರು.

ಪಂಜಾಬಿನಲ್ಲಿ ತಳಮಟ್ಟಕ್ಕೂ ನಮ್ಮ ಕಾರ್ಯಕ್ರಮಗಳನ್ನು ಮತ್ತು ಯೋಜನೆಗಳನ್ನು ತಲುಪಿಸಲಾಗುವುದು. ಬಡವರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವವರೆಗೂ ವಿರಾಮಿಸುವುದಿಲ್ಲ ಎಂದು ಮೋದಿ ತಿಳಿಸಿದರು.

ರಷ್ಯಾ- ಉಕ್ರೇನ್ ಯುದ್ಧದ ನಂತರ ನಾವು ಆಮದು ಮಾಡಿಕೊಳ್ಳುತ್ತಿದ್ದ ಸೂರ್ಯಕಾಂತಿ ಅಡುಗೆ ಎಣ್ಣೆ, ಕಲ್ಲಿದ್ದಲು , ಗ್ಯಾಸ್, ರಸಗೊಬ್ಬರ ದರದಲ್ಲಿ ಏರಿಕೆಯಾಗಿದೆ. ಭಾರತ ಶಾಂತಿಯನ್ನು ಬಯಸುತ್ತದೆ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ನರೇಂದ್ರ ಮೋದಿ ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.