ಆರು ರಾಜ್ಯಗಳ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆ: ಮತದಾನ ಆರಂಭ
ಆರು ರಾಜ್ಯಗಳ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಇಂದು ಬೆಳಿಗ್ಗೆಯಿಂದ ಮತದಾನ ಆರಂಭವಾಗಿದೆ. ಪ್ರಮುಖವಾಗಿ ಬಿಜೆಪಿ ಹಾಗೂ ಪ್ರಾದೇಶಿಕ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ನವದೆಹಲಿ: ಆರು ರಾಜ್ಯಗಳ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಇಂದು ಬೆಳಿಗ್ಗೆಯಿಂದ ಮತದಾನ ಆರಂಭವಾಗಿದೆ. ಪ್ರಮುಖವಾಗಿ ಬಿಜೆಪಿ ಹಾಗೂ ಪ್ರಾದೇಶಿಕ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಬಿಹಾರದಲ್ಲಿ ಎರಡು ಮತ್ತು ಮಹಾರಾಷ್ಟ್ರ, ಹರಿಯಾಣ, ತೆಲಂಗಾಣ, ಉತ್ತರ ಪ್ರದೇಶ ಮತ್ತು ಒಡಿಶಾ ರಾಜ್ಯಗಳಲ್ಲಿ ತಲಾ ಒಂದು ಸ್ಥಾನಗಳಿಗೆ ಉಪಚುನಾವಣೆ ನಡೆಯುತ್ತಿದೆ.
ಬಿಹಾರದ ಮೊಕಾಮಾ ಮತ್ತು ಗೋಪಾಲ್‌ಗಂಜ್, ಮಹಾರಾಷ್ಟ್ರದ ಅಂಧೇರಿ (ಪೂರ್ವ), ಹರಿಯಾಣದ ಆದಂಪುರ, ತೆಲಂಗಾಣದ ಮುನುಗೋಡು, ಉತ್ತರ ಪ್ರದೇಶದ ಗೋಲಾ ಗೋರಖ್‌ನಾಥ್ ಮತ್ತು ಒಡಿಶಾದ ಧಾಮ್‌ನಗರ ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ.
ಮತದಾನಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಪಚುನಾವಣೆಯ ಫಲಿತಾಂಶವು ನವೆಂಬರ್ 6ರಂದು ಪ್ರಕಟಗೊಳ್ಳಲಿದೆ. ಉಪಚುನಾವಣೆ ನಡೆಯುತ್ತಿರುವ ಏಳು ಸ್ಥಾನಗಳಲ್ಲಿ ಕಳೆದ ಬಾರಿ ಬಿಜೆಪಿ ಮೂರು, ಕಾಂಗ್ರೆಸ್ ಎರಡು, ಶಿವಸೇನಾ ಮತ್ತು ಆರ್‌ಜೆಡಿ ತಲಾ ಒಂದು ಸ್ಥಾನಗಳಲ್ಲಿ ಗೆಲುವು ದಾಖಲಿಸಿತ್ತು.
ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವು ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಪತನಗೊಳಿಸಿ ಸರ್ಕಾರ ರಚಿಸಿದ್ದರೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಹಾರದಲ್ಲಿ ಕಾಂಗ್ರೆಸ್ ಮತ್ತು ಆರ್ಜೆಡಿಯೊಂದಿಗೆ ಮೈತ್ರಿ ಮಾಡಿಕೊಂಡು ಮತ್ತೊಮ್ಮೆ ಸರ್ಕಾರ ರಚಿಸಿದ್ದಾರೆ. ನವೆಂಬರ್ 6ರಂದು (ಭಾನುವಾರ) ಮತಗಳ ಎಣಿಕೆ ನಡೆಯಲಿದೆ.
ಗುಜರಾತ್ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ಇಂದು ದಿನಾಂಕವನ್ನು ಘೋಷಿಸಲಿದೆ. ಮಧ್ಯಾಹ್ನ 12 ಗಂಟೆಗೆ ಚುನಾವಣೆ ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


