ಮುಂಬೈ ವಿಮಾನ ನಿಲ್ದಾಣದಲ್ಲಿ ಮೂವರ ಬಂಧನ, 4.1 ಕೋಟಿ ರೂ. ಮೊತ್ತದ ವಿದೇಶಿ ಕರೆನ್ಸಿ ವಶ; ವಿಡಿಯೋ
ಮುಂಬೈ ವಿಮಾನ ನಿಲ್ದಾಣದಲ್ಲಿ ಒಂದೇ ಕುಟುಂಬದ ಮೂವರನ್ನು ಬಂಧಿಸಿರುವ ಕಸ್ಟಮ್ ಅಧಿಕಾರಿಗಳು ಸುಮಾರು 4.1 ಕೋಟಿ ರೂ. ಮೊತ್ತದ ವಿದೇಶಿ ಕರೆನ್ಸಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ: ಮುಂಬೈ ವಿಮಾನ ನಿಲ್ದಾಣದಲ್ಲಿ ಒಂದೇ ಕುಟುಂಬದ ಮೂವರನ್ನು ಬಂಧಿಸಿರುವ ಕಸ್ಟಮ್ ಅಧಿಕಾರಿಗಳು ಸುಮಾರು 4.1 ಕೋಟಿ ರೂ. ಮೊತ್ತದ ವಿದೇಶಿ ಕರೆನ್ಸಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ಎಫ್ ಝಡ್ 446 ವಿಮಾನದ ಮೂಲಕ ದುಬೈಗೆ ತೆರಳುತ್ತಿದ್ದ ಮೂವರು ಭಾರತೀಯ ಪ್ರಜೆಗಳನ್ನು ವಿಮಾ ನಿಲ್ದಾಣದಲ್ಲಿ ಪರಿಶೀಲಿಸಿದಾಗ 4,97,000 ಅಮೆರಿಕನ್ ಡಾಲರ್ ಅಂದಾಜು ರೂ. 4.1 ಕೋಟಿ ರೂ. ಮೊತ್ತದ ವಿದೇಶಿ ಕರೆನ್ಸಿ ಪತ್ತೆಯಾಗಿದೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಅಕ್ಟೋಬರ್ 27 ರಂದು ಕೋಟ್ಯಂತರ ರೂ. ಮೊತ್ತದ ಅಭರಣಗಳನ್ನು ಹೊಂದಿದ್ದ ಇಬ್ಬರು ಭಾರತೀಯರನ್ನು ಇಲ್ಲಿಯೇ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದರು. ಅಕ್ಟೋಬರ್ 14 ರಂದು ಇದೇ ರೀತಿಯ ಪ್ರಕರಣ ನಡೆದಿತ್ತು. ಭಾರತೀಯ ಪ್ರಜೆಯೊಬ್ಬನನ್ನು ಬಂಧಿಸಿದ ಪೊಲೀಸರು ರೂ.8.40 ಕೋಟಿ ಮೊತ್ತದ 16 ಕೆಜಿ ಚಿನ್ನವನ್ನು ವಶಕ್ಕೆ ಪಡೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


