ರಾಷ್ಟ್ರ ರಾಜಧಾನಿಯಲ್ಲಿ ದಟ್ಟ ವಾಯುಮಾಲಿನ್ಯ, ಸರ್ಕಾರಕ್ಕೆ ಗಂಭೀರತೆ ಇಲ್ಲ: ವರುಣ್ ಗಾಂಧಿ
ದಟ್ಟ ವಾಯುಮಾಲಿನ್ಯದಿಂದ ರಾಷ್ಟ್ರ ರಾಜಧಾನಿಯಲ್ಲಿ ಪರಿಸರ ತೀವ್ರ ರೀತಿಯಲ್ಲಿ ಹದಗೆಡುತ್ತಿರುವಂತೆಯೇ, ಪರಿಸ್ಥಿತಿ ನಿಭಾಯಿಸುವಲ್ಲಿ ದೆಹಲಿ ಹಾಗೂ ಕೇಂದ್ರ ಸರ್ಕಾರದ ನಡುವಣ ಸಮನ್ವಯತೆ, ಕಾಳಜಿ ಕೊರತೆಯನ್ನು ಸಂಸದ ವರುಣ್ ಗಾಂಧಿ ಗುರುವಾರ ಪ್ರಶ್ನಿಸಿದ್ದಾರೆ.

ನವದೆಹಲಿ: ದಟ್ಟ ವಾಯುಮಾಲಿನ್ಯದಿಂದ ರಾಷ್ಟ್ರ ರಾಜಧಾನಿಯಲ್ಲಿ ಪರಿಸರ ತೀವ್ರ ರೀತಿಯಲ್ಲಿ ಹದಗೆಡುತ್ತಿರುವಂತೆಯೇ, ಪರಿಸ್ಥಿತಿ ನಿಭಾಯಿಸುವಲ್ಲಿ ದೆಹಲಿ ಹಾಗೂ ಕೇಂದ್ರ ಸರ್ಕಾರದ ನಡುವಣ ಸಮನ್ವಯತೆ, ಕಾಳಜಿ ಕೊರತೆಯನ್ನು ಸಂಸದ ವರುಣ್ ಗಾಂಧಿ ಗುರುವಾರ ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ಸಮಸ್ಯೆಯನ್ನು ಸರ್ಕಾರವಾಗಲಿ ಅಥವಾ ಜನರಾಗಲಿ ಗಂಭೀರವಾಗಿ ತೆಗೆದುಕೊಂಡಿಲ್ಲ. ಉಸಿರಾಟ, ಹೃದಯ ಮತ್ತು ಶ್ವಾಸಕೋಶ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಂದ ಆಸ್ಪತ್ರೆಗಳು ತುಂಬಿ ತುಳುಕಾಡುತ್ತಿವೆ ಎಂದು ಹೇಳಿದ್ದಾರೆ.
ದೆಹಲಿ-ಎನ್ ಸಿಆರ್ ಪ್ರದೇಶದಲ್ಲಿನ 10 ಮಕ್ಕಳ ಪೈಕಿ 8 ಮಕ್ಕಳಿಗೆ ಉಸಿರಾಟದ ಸಮಸ್ಯೆಯಿದೆ. ಚರ್ಚೆ ನಡೆದ ಒಂದು ವರ್ಷದ ನಂತರವೂ ಅನೇಕ ಸರ್ಕಾರಿ ಘಟಕಗಳ ನಡುವಣ ಸಮನ್ವಯತೆಯ ಕೊರತೆ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.
ಒಂದು ವೇಳೆ ಈ ಸಮಸ್ಯೆಯನ್ನು ಹೋಗಲಾಡಿಸದಿದ್ದಲ್ಲಿ ಗಾಳಿಯ ಗುಣಮಟ್ಟ ಕ್ಷಿಣಿಸುವುದರೊಂದಿಗೆ 46 ಮಿಲಿಯನ್ ಜನರ ಉಸಿರಾಟಕ್ಕೆ ತುಂಬಾ ಸಮಸ್ಯೆಯಾಗಲಿದೆ ಎಂದು ವರುಣ್ ಗಾಂಧಿ ಕಳವಳ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


