ಡಿ.1 ಮತ್ತು 5 ರಂದು ಎರಡು ಹಂತಗಳಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ; ಡಿಸೆಂಬರ್ 8 ಕ್ಕೆ ಮತ ಎಣಿಕೆ
ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಗುಜರಾತ್ ವಿಧಾನಸಭೆ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಗುರುವಾರ ಪ್ರಕಟಿಸಿದ್ದಾರೆ.

ನವದೆಹಲಿ: ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಗುಜರಾತ್ ವಿಧಾನಸಭೆ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಗುರುವಾರ ಪ್ರಕಟಿಸಿದ್ದಾರೆ.
ಗುಜರಾತ್‌ನ ಒಟ್ಟು 182 ವಿಧಾನಸಭಾ ಸ್ಥಾನಗಳ ಪೈಕಿ 89 ಸ್ಥಾನಗಳಿಗೆ ಡಿಸೆಂಬರ್ 1 ರಂದು ಮತ್ತು ಉಳಿದ 93 ಸ್ಥಾನಗಳಿಗೆ ಡಿಸೆಂಬರ್ 5 ರಂದು ಮತದಾನ ನಡೆಯಲಿದೆ.
ಗುಜರಾತ್ 182 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ 99 ಸ್ಥಾನಗಳನ್ನು ಗೆದ್ದು ಸತತ ಆರನೇ ಬಾರಿ ಗೆಲುವನ್ನು ಸಾಧಿಸಿತ್ತು. ಕಾಂಗ್ರೆಸ್ ಕಳೆದ ಚುನಾವಣೆಯಲ್ಲಿ 77 ಸ್ಥಾನಗಳನ್ನು ಗಳಿಸಿತ್ತು.
ಶೇಕಡಾವಾರು ಲೆಕ್ಕದಲ್ಲಿ ಬಿಜೆಪಿ ಶೇಕಡಾ 49.05 ಮಾನ್ಯ ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಶೇಕಡಾ 42.97 ರಷ್ಟು ಮತಗಳನ್ನು ಪಡೆದಿತ್ತು. ಕಳೆದ ವಿಧಾನಸಭಾ ಚುನಾವಣೆಯ ನಂತರ ಕೆಲವು ಸದಸ್ಯರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರಿಂದ ಬಿಜೆಪಿ ಸದನದಲ್ಲಿ ತನ್ನ ಸಂಖ್ಯೆಯನ್ನು 111 ಕ್ಕೆ ಹೆಚ್ಚಿಸಿಕೊಂಡಿತು. ಕಾಂಗ್ರೆಸ್ ಸಂಖ್ಯೆ 62 ಕ್ಕೆ ಇಳಿಯಿತು.
ಇದೀಗ ತನ್ನ ಬೇರನ್ನು ಭದ್ರಪಡಿಸಿ ನೆಲೆಯೂರಲು ಆಮ್ ಆದ್ಮಿ ಪಕ್ಷ (AAP) ಗುಜರಾತ್‌ನಲ್ಲಿ ಸಾಕಷ್ಟು ಪ್ರಯತ್ನ ಮಾಡುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಪಕ್ಷ ಯಶಸ್ವಿಯಾದ ನಂತರ ಗುಜರಾತ್ ನಲ್ಲಿ ಎಎಪಿಗೆ ಕಾಲಿಡುವ ಪ್ರಯತ್ನದಲ್ಲಿ ಹಲವಾರು ಪ್ರವಾಸ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮತ್ತು ಹಿಮಾಚಲ ಪ್ರದೇಶಕ್ಕೆ ಆಗಾಗ ಭೇಟಿ ನೀಡಿ ಹಲವು ಯೋಜನೆಗಳನ್ನು ಉದ್ಘಾಟಿಸುತ್ತಿದ್ದಾರೆ. ಅಲ್ಲದೆ, 2023 ರಲ್ಲಿ ಇತರ ಕೆಲವು ರಾಜ್ಯಗಳ ಚುನಾವಣೆಗಳೊಂದಿಗೆ ಈ ಚುನಾವಣೆಗಳು 2024 ರ ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕವೆಂದು ಪರಿಗಣಿಸಲ್ಪಟ್ಟಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


