ದೇಶ

ದೆಹಲಿ ಮಹಾನಗರ ಪಾಲಿಕೆಗೆ ಚುನಾವಣೆ ಘೋಷಣೆ; ಡಿಸೆಂಬರ್ 4ಕ್ಕೆ ಮತದಾನ, 7 ರಂದು ಫಲಿತಾಂಶ

ದೆಹಲಿ ಮಹಾನಗರ ಪಾಲಿಕೆಗೆ ಶುಕ್ರವಾರ ಚುನಾವಣೆಗೆ ಘೋಷಣೆಯಾಗಿದ್ದು, ಡಿಸೆಂಬರ್ 4 ರಂದು ಮತದಾನ ನಡೆಯಲಿದೆ ಮತ್ತು ಡಿಸೆಂಬರ್ 7 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ವಿಜಯ್ ದೇವ್...

ದೆಹಲಿ ಮಹಾನಗರ ಪಾಲಿಕೆಗೆ ಚುನಾವಣೆ ಘೋಷಣೆ; ಡಿಸೆಂಬರ್ 4ಕ್ಕೆ ಮತದಾನ, 7 ರಂದು ಫಲಿತಾಂಶ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಗೆ ಶುಕ್ರವಾರ ಚುನಾವಣೆಗೆ ಘೋಷಣೆಯಾಗಿದ್ದು, ಡಿಸೆಂಬರ್ 4 ರಂದು ಮತದಾನ ನಡೆಯಲಿದೆ ಮತ್ತು ಡಿಸೆಂಬರ್ 7 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ವಿಜಯ್ ದೇವ್ ಅವರು ಪ್ರಕಟಿಸಿದ್ದಾರೆ.

ಇಂದಿನಿಂದಲೇ ರಾಷ್ಟ್ರ ರಾಜಧಾನಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಅವರು ದೇವ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿಜಯ್ ದೇವ್ ಅವರು, "ದೆಹಲಿಯ ಮುನ್ಸಿಪಲ್ ಚುನಾವಣೆಗೆ ಡಿಸೆಂಬರ್ 4 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 7 ರಂದು ಫಲಿತಾಂಶ ಪ್ರಕಟವಾಗಲಿದೆ. ನವೆಂಬರ್ 7 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ನಾಮಪತ್ರ ಸಲ್ಲಿಸಲು ನವೆಂಬರ್ 14 ಕೊನೆಯ ದಿನವಾಗಿದೆ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.