ಶೀಘ್ರದಲ್ಲೇ ಜಗನ್ ಮೋಹನ್ ರೆಡ್ಡಿ ಸರ್ಕಾರ ಪತನ: ಪವನ್ ಕಲ್ಯಾಣ್ ಭವಿಷ್ಯ
ವೈಎಸ್ ಆರ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂದು ನಟ, ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಹೇಳಿದ್ದಾರೆ.

ಅಮರಾವತಿ : ವೈಎಸ್ ಆರ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂದು ನಟ, ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಹೇಳಿದ್ದಾರೆ.
ಗುಂಟೂರು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು ‘ಜಗನ್ ಸರ್ಕಾರ ಪತನವಾಗಲಿದೆ‘ಎಂದು ಹೇಳಿದರು. ಜನಸೇನಾ ಪಕ್ಷದ ಬೆಂಬಲಿಗರ ಮನೆಗಳನ್ನು ಧ್ವಂಸಗೊಳಿಸಿರುವುದನ್ನು ಖಂಡಿಸಿದ ಪವನ್ ಕಲ್ಯಾಣ್, ಈ ಧ್ವಂಸದಿಂದಲೇ ಸರ್ಕಾರದ ಪತನವು ಆರಂಭವಾಗಿದೆ. ಈ ಸರ್ಕಾರ ಬಹಳ ದಿನಗಳವರೆಗೆ ಇರುವುದಿಲ್ಲ ಎಂದು ಗುಡುಗಿದ್ದಾರೆ.
ಗ್ರಾಮದಲ್ಲಿ ಒತ್ತುವರಿ ನೆಪದಲ್ಲಿ ಯಾವುದೇ ನೋಟಿಸ್ ನೀಡದೆ ಮನೆಗಳನ್ನು ಧ್ವಂಸ ಮಾಡಲಾಗಿದೆ. ಬಹುಪಾಲು ಮನೆಗಳು ಜನಾಸೇನಾ ಪಕ್ಷದ ಬೆಂಬಲಿಗರ ಮನೆಗಳು ಎಂದು ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


