ಮದ್ಯಪಾನ ವೇಳೆ ದುರಂತ; ಗಂಟಲಲ್ಲಿ ಆಮ್ಲೆಟ್ ಸಿಲುಕಿ ವ್ಯಕ್ತಿ ಸಾವು!
ಕುಡಿದ ಮತ್ತಿನಲ್ಲಿ ತಾನು ತಿಂದ ಆಮ್ಲೆಟ್ ಗಂಟಲಲ್ಲಿ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಹೈದರಾಬಾದ್: ಕುಡಿದ ಮತ್ತಿನಲ್ಲಿ ತಾನು ತಿಂದ ಆಮ್ಲೆಟ್ ಗಂಟಲಲ್ಲಿ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ತೆಲಂಗಾಣದ ಜನಗಾಂವ್ ಜಿಲ್ಲೆಯ ಬಚನ್ನಪೇಟೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕುಡಿಯಲು ಬಾರ್ಗೆ ಹೋದ ವ್ಯಕ್ತಿಯೊಬ್ಬ ಕಂಠಪೂರ್ತಿ ಕುಡಿದು ಬಳಿಕ ಆಮ್ಲೆಟ್ ತಿಂದಿದ್ದಾನೆ. ಈ ವೇಳೆ ಆಮ್ಲೆಟ್ ಗಂಟಲಿನಲ್ಲಿ ಸಿಕ್ಕಿಕೊಂಡ ಪರಿಣಾಮ ಆತ ಮೃತಪಟ್ಟಿದ್ದಾನೆ.
ಸ್ಥಳೀಯರ ಪ್ರಕಾರ ಬಚ್ಚನ್ನಪೇಟೆಯ ನಿವಾಸಿ ಇದುಲಕಂತಿ ಭೂಪಾಲ್ ರೆಡ್ಡಿ (38) ಮೃತ ವ್ಯಕ್ತಿಯಾಗಿದ್ದು, ಈತ ಸ್ಥಳೀಯ ಮದ್ಯದ ಅಂಗಡಿಯೊಂದರಲ್ಲಿ ಕೊಠಡಿಯಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದ. ಈ ವೇಳೆ, ತಿನ್ನುತ್ತಿದ್ದ ಆಮ್ಲೆಟ್ ಗಂಟಲಿನಲ್ಲಿ ಸಿಲುಕಿಕೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


