ದೇಶ

ಮದ್ರಾಸ್ ಹೈಕೋರ್ಟ್ ತೀರ್ಪು ಪ್ರಶ್ನಿಸಲು ಆರ್ ಎಸ್ಎಸ್ ನಿರ್ಧಾರ; ನ.6 ರ ಪಥ ಸಂಚಲನ ಮುಂದೂಡಿಕೆ

ಕೆಲವು ಷರತ್ತುಗಳೊಂದಿಗೆ ಪಥ ಸಂಚಲನ ನಡೆಸಲು ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ನಿರ್ಧರಿಸಿದ್ದು, ನವೆಂಬರ್ 6 ರಂದು ನಿಗದಿಯಾಗಿದ್ದ ಪಥ ಸಂಚಲನವನ್ನು...

ಮದ್ರಾಸ್ ಹೈಕೋರ್ಟ್ ತೀರ್ಪು ಪ್ರಶ್ನಿಸಲು ಆರ್ ಎಸ್ಎಸ್ ನಿರ್ಧಾರ; ನ.6 ರ ಪಥ ಸಂಚಲನ ಮುಂದೂಡಿಕೆ
ಸಾಂದರ್ಭಿಕ ಚಿತ್ರ
Published On :

ಚೆನ್ನೈ: ಕೆಲವು ಷರತ್ತುಗಳೊಂದಿಗೆ ಪಥ ಸಂಚಲನ ನಡೆಸಲು ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ನಿರ್ಧರಿಸಿದ್ದು, ನವೆಂಬರ್ 6 ರಂದು ನಿಗದಿಯಾಗಿದ್ದ ಪಥ ಸಂಚಲನವನ್ನು ಶನಿವಾರ ಮುಂದೂಡಿದೆ.

"ಆಡಿಟೋರಿಯಂ ಅಥವಾ ಕಾಂಪೌಂಡ್‌ನ ನಾಲ್ಕು ಗೋಡೆಗಳ ಒಳಗೆ ಮಾತ್ರ ಪಥ ಸಂಚಲನ ನಡೆಸಬೇಕು ಎಂದು ಹೈಕೋರ್ಟ್ ನಿರ್ಬಂಧ ವಿಧಿಸಿದ್ದು, ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇತರ ರಾಜ್ಯಗಳಲ್ಲಿ ಮಾಡಿದಂತೆ ಸಾರ್ವಜನಿಕ ರಸ್ತೆಗಳಲ್ಲಿ ಪಥ ಸಂಚಲನ ನಡೆಸಲು ಅನುಮತಿ ಪಡೆಯಲು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ" ಎಂದು ಆರ್‌ಎಸ್‌ಎಸ್ ಮೂಲಗಳು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ.

ಇದೇ ವೇಳೆ ಹೇಳಿಕೆ ನೀಡಿರುವ ಆರ್‌ಎಸ್‌ಎಸ್‌ನ ದಕ್ಷಿಣ ವಲಯ ಅಧ್ಯಕ್ಷ ಆರ್.ವನ್ನಿಯರಾಜನ್, ಕಳೆದ 97 ವರ್ಷಗಳಿಂದ ತಮಿಳುನಾಡು ಸೇರಿದಂತೆ ದೇಶದಾದ್ಯಂತ ಶಾಂತಿಯುತವಾಗಿ ಆರ್‌ಎಸ್‌ಎಸ್ ತನ್ನ ಪಥ ಸಂಚಲನ ನಡೆಸುತ್ತಿದೆ ಎಂದಿದ್ದಾರೆ.

"ಸ್ವಾತಂತ್ರ್ಯದ 75ನೇ ವರ್ಷಾಚರಣೆ ಮತ್ತು ಡಾ ಅಂಬೇಡ್ಕರ್ ಅವರ 125 ನೇ ಜನ್ಮದಿನದ ಅಂಗವಾಗಿ, ಆರ್‌ಎಸ್‌ಎಸ್‌ನ ತಮಿಳುನಾಡು ಘಟಕವು ಅಕ್ಟೋಬರ್ 2 ರಂದು 50 ಸ್ಥಳಗಳಲ್ಲಿ ಪಥ ಸಂಚಲನ ನಡೆಸಲು ಯೋಜಿಸಿತ್ತು ಮತ್ತು ಇದಕ್ಕಾಗಿ ಪೊಲೀಸರಿಂದ ಅನುಮತಿ ಕೇಳಲಾಗಿತ್ತು. ಆದರೆ ಪೊಲೀಸರು ತಮ್ಮ ಮನವಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ಹೈಕೋರ್ಟ್‌ ಮೆಟ್ಟಿಲೇರಿತ್ತು ಎಂದು ವನ್ನಿಯರಾಜನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.