ಉಪ ಚುನಾವಣೆ ಫಲಿತಾಂಶ: ಬಿಹಾರ, ಹರಿಯಾಣದಲ್ಲಿ ಬಿಜೆಪಿ ಗೆಲುವು, ಒಡಿಶಾದಲ್ಲಿ ಮುನ್ನಡೆ
ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ನಡೆದಿದ್ದ ಉಪ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಬಿಹಾರ ಮತ್ತು ಹರಿಯಾಣದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.

ನವದೆಹಲಿ: ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ನಡೆದಿದ್ದ ಉಪ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಬಿಹಾರ ಮತ್ತು ಹರಿಯಾಣದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಅಲ್ಲದೆ ಒಡಿಶಾದಲ್ಲಿ ಮುನ್ನಡೆ ಸಾಧಿಸಿದೆ.
ಬಿಜೆಪಿ ಮತ್ತು ಇತರ ಪ್ರಾದೇಶಿಕ ಪಕ್ಷಗಳ ಜಿದ್ದಾಜಿದ್ದಿ ಪೈಪೋಟಿಗೆ ಸಾಕ್ಷಿಯಾಗಿದ್ದ 6 ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಮತಎಣಿಕೆ ಇಂದು ನಡೆಯುತ್ತಿದೆ.
ಬಿಜೆಪಿ ಹರಿಯಾಣ, ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಮೂರು ಸ್ಥಾನಗಳನ್ನು ಗೆದ್ದಿದ್ದರೆ, ರಾಷ್ಟ್ರೀಯ ಜನತಾ ದಳ(ಆರ್ ಜೆಡಿ)ವು ಮೊಕಾಮಾ ವಿಧಾನಸಭಾ ಸ್ಥಾನವನ್ನು ಉಳಿಸಿಕೊಂಡಿದೆ.
ಮುಂಬೈನ ಅಂಧೇರಿ(ಪೂರ್ವ) ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಶಿವಸೇನೆಯ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಅಭ್ಯರ್ಥಿ ರುತುಜಾ ಲಟ್ಕೆ ಗೆಲುವು ಸಾಧಿಸಿದರೆ, ತೆಲಂಗಾಣ ರಾಷ್ಟ್ರ ಸಮಿತಿಯು ತೆಲಂಗಾಣದ ಮುನುಗೋಡುದಲ್ಲಿ ಬಿಜೆಪಿಗಿಂತ ಸ್ವಲ್ಪ ಮುನ್ನಡೆ ಕಾಯ್ದುಕೊಂಡಿದೆ.
ಉತ್ತರ ಪ್ರದೇಶದ ಗೋಲ ಗೋಕರನಾಥ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅಮನ್ ಗಿರಿ ಅವರು ಸಮೀಪದ ಪ್ರತಿಸ್ಪರ್ಧಿ ಮತ್ತು ಸಮಾಜವಾದಿ ಪಕ್ಷದ ಅಭ್ಯರ್ಥಿಯನ್ನು 34,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ.
ಹರಿಯಾಣದ ಅದಂಪುರದಲ್ಲೂ ಬಿಜೆಪಿ ಅಭ್ಯರ್ಥಿ ಭವ್ಯಾ ಬಿಷ್ಣೋಯ್ ಅವರು ಪ್ರತಿಸ್ಪರ್ಧಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಜೈ ಪ್ರಕಾಶ್ ಅವರನ್ನು ಸುಮಾರು 16,000 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಬಿಹಾರದಲ್ಲಿ ಆರ್ಜೆಡಿ ಅಭ್ಯರ್ಥಿ ನೀಲಮ್ ದೇವಿ ಅವರು ಮೊಕಾಮಾ ಕ್ಷೇತ್ರದಲ್ಲಿ 16,000 ಮತಗಳಿಂದ ಗೆಲುವು ಸಾಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


