ಜಿದ್ದಾಜಿದ್ದಿ ಪೈಪೋಟಿಗೆ ಸಾಕ್ಷಿಯಾಗಿರುವ ಆರು ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮತ ಎಣಿಕೆ
ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ನಡೆದಿದ್ದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.

ನವದೆಹಲಿ: ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ನಡೆದಿದ್ದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.
ಬಿಜೆಪಿ ಮತ್ತು ಇತರ ಪ್ರಾದೇಶಿಕ ಪಕ್ಷಗಳ ಜಿದ್ದಾಜಿದ್ದಿ ಪೈಪೋಟಿಗೆ ಸಾಕ್ಷಿಯಾಗಿರುವ 6 ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಮತಎಣಿಕೆ ಇಂದು (ನ 6) ನಡೆಯಲಿದೆ. ಬಿಹಾರದ ಮೊಕಮಾ ಮತ್ತು ಗೋಪಾಲ್ಗಂಜ್ ವಿಧಾನಸಭಾ ಕ್ಷೇತ್ರ, ಮಹಾರಾಷ್ಟ್ರದ ಅಂಧೇರಿ (ಪೂರ್ವ), ಹರಿಯಾಣದ ಅದಮ್ಪುರ್, ತೆಲಂಗಾಣದ ಮುನುಗೋಡ್, ಉತ್ತರ ಪ್ರದೇಶದ ಗೋಲಾ ಗೋಕರ್ಣನಾಥ್ ಮತ್ತು ಒಡಿಶಾದ ಧಾಮ್ನಗರ್ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಈ ಏಳು ಕ್ಷೇತ್ರಗಳ ಪೈಕಿ ಬಿಜೆಪಿ ಮೂರು, ಕಾಂಗ್ರೆಸ್ 2, ಶಿವಸೇನೆ ಮತ್ತು ಆರ್ಜೆಡಿ ತಲಾ ಒಂದು ಕ್ಷೇತ್ರಗಳನ್ನು ಹೊಂದಿತ್ತು
ಎಲ್ಲ ಏಳು ಕ್ಷೇತ್ರಗಳಲ್ಲಿ ಮತಎಣಿಕೆ ಆರಂಭಗೊಂಡಿದ್ದು, ಯಾವ ಪಕ್ಷ ಗೆಲ್ಲಲಿದೆ ಎಂಬುದು ಕುತೂಹಲ ಕೆರಳಿಸಿವೆ. ಭಾರಿ ಕುತೂಹಲ ಕೆರಳಿಸಿರುವ ತೆಲಂಗಾಣದ ಮುನುಗೋಡ್ ಕ್ಷೇತ್ರದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ನಾಲ್ಕನೇ ಸುತ್ತಿನ ಮತ ಎಣಿಕೆ ಅಂತ್ಯಕ್ಕೆ ಕೋಮಟಿರೆಡ್ಡಿ ರಾಜ್ ಗೋಪಾಲ ರೆಡ್ಡಿ 1,100 ಮತಗಳ ಮುನ್ನಡೆ ಗಳಿಸಿದ್ದಾರೆ.
ಹರಿಯಾಣದ ಆದಂಪುರ ಮತ್ತು ಉತ್ತರ ಪ್ರದೇಶದ ಗೋಲ ಗೋಕರ್ಣನಾಥ ಕ್ಷೇತ್ರದಲ್ಲೂ ಬಿಜೆಪಿ ಮುನ್ನಡೆ ಮುನ್ನಡೆಯಲ್ಲಿದೆ. ಬಿಹಾರದ ಮೊಕಾಮಾ ಕ್ಷೇತ್ರದಲ್ಲಿ ಆರ್‌ಜೆಡಿಯ ನೀಲಂ ದೇವಿ ಮುನ್ನಡೆಯಲ್ಲಿದ್ದಾರೆ. ಮಹಾರಾಷ್ಟ್ರದ ಅಂಧೇರಿ ಪೂರ್ವದಲ್ಲಿ ಉದ್ಧವ್ ಠಾಕ್ರೆ ಅವರ ಶಿವ ಸೇನಾದ ನಾಯಕ ಋತುಜ ಲಟಕೆ, 4,277 ಮತಗಳಿಂದ ಮುನ್ನಡೆ ಗಳಿಸಿದ್ದಾರೆ.
ಬಿಹಾರದಲ್ಲಿ ಎರಡು ಮತ್ತು ಮಹಾರಾಷ್ಟ್ರ, ಹರಿಯಾಣ, ತೆಲಂಗಾಣ, ಉತ್ತರ ಪ್ರದೇಶ ಮತ್ತು ಒಡಿಶಾ ರಾಜ್ಯಗಳಲ್ಲಿ ತಲಾ ಒಂದು ಸ್ಥಾನಗಳಿಗೆ ಉಪಚುನಾವಣೆ ನಡೆದಿತ್ತು. ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿಗೆ ಪ್ರಾದೇಶಿಕ ಪಕ್ಷಗಳು ಸವಾಲೊಡ್ಡಿವೆ.
ನವೆಂಬರ್ 3 ರಂದು ಮತದಾನ ನಡೆದಿದ್ದು, ಇಂದು ಮತ ಎಣಿಕೆ ನಡೆಯುತ್ತಿದೆ. ಚುನಾವಣಾ ಆಯೋಗದ ಟ್ರೆಂಡ್‌ಗಳ ಪ್ರಕಾರ ಆರು ರಾಜ್ಯಗಳಾದ್ಯಂತ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ, ತೆಲಂಗಾಣದ ಮುನುಗೋಡೆ ಕ್ಷೇತ್ರದಲ್ಲಿ ಗುರುವಾರ ಅತಿ ಹೆಚ್ಚು ಮತದಾನವಾಗಿದೆ. ಮಹಾರಾಷ್ಟ್ರ, ಹರಿಯಾಣ, ಬಿಹಾರ, ತೆಲಂಗಾಣ, ಒಡಿಶಾ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಖಾಲಿ ಇರುವ ಏಳು ಸ್ಥಾನಗಳಿಗೆ ಗುರುವಾರ ಉಪಚುನಾವಣೆ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


