ಗುಜರಾತ್ ಚುನಾವಣೆ: ಬಿಜೆಪಿ ಸಂಸದರು, ಶಾಸಕರ ಸಂಬಂಧಿಕರಿಗೆ ಟಿಕೆಟ್ ಇಲ್ಲ!
ಗುಜರಾತ್ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡಿದ್ದು, ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಬಿಜೆಪಿ ಮಹತ್ವದ ನಿರ್ಧಾರ ಕೈಗೊಂಡಿದೆ.

ಅಹ್ಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡಿದ್ದು, ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಬಿಜೆಪಿ ಮಹತ್ವದ ನಿರ್ಧಾರ ಕೈಗೊಂಡಿದೆ.
ಹಾಲಿ ಶಾಸಕರು, ಸಂಸದರಾಗಿರುವವರ ಪೈಕಿ ಅವರ ಸಂಬಂಧಿಕರಿಗೆ ಟಿಕೆಟ್ ನೀಡದೇ ಇರಲು ಬಿಜೆಪಿ ನಿರ್ಧರಿಸಿದೆ.
ಈ ಮಾಹಿತಿಯನ್ನು ಬಿಜೆಪಿ ರಾಜ್ಯಾಧಿಯಕ್ಷ ಸಿಆರ್ ಪಾಟಿಲ್ ಸ್ಪಷ್ಟಪಡಿಸಿದ್ದಾರೆ. ಭರೂಚ್ ಸಂಸದ ಮನ್ಸುಖ್ ವಸವಾ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಮ್ಮ ಮಗಳಿಗೆ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದರು. ಇವರ ರೀತಿಯಲ್ಲೇ ಪಕ್ಷದ ಇನ್ನೂ ಹಲವು ಸಂಸದರು, ಶಾಸಕರು, ಸಂಸದರು ಬೇಡಿಕೆಗಳನ್ನು ಹೊಂದಿದ್ದರು.
ಆಡಳಿತಾರೂಢ ಬಿಜೆಪಿ 182 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿ ಕ್ಷೇತ್ರಕ್ಕೆ 3 ಸಂಭಾವ್ಯರ ಪಟ್ಟಿಯನ್ನು ಸಿದ್ಧಗೊಳಿಸುತ್ತಿದೆ. ಗುರುವಾರದಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಚುನಾವಣಾ ಸಮಿತಿ ಸಭೆ ನಡೆಸಲಿದ್ದಾರೆ. ಈ ನಡುವೆ ಪ್ರಣಾಳಿಕೆಗೆ ಬಿಜೆಪಿ ಸಾರ್ವಜನಿಕರಿಂದ ಸಲಹೆ ಹೇಳಿದ್ದು, ಅಗ್ರೆಸರ್ ಗುಜರಾತ್ ಎಂಬ ವೆಬ್ ಸೈಟ್ ನಲ್ಲಿ ಸಲಹೆ ನೀಡಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


