ಬಿಜೆಪಿಯ 'ಡಬಲ್ ಇಂಜಿನ್' ಮೋಸದಿಂದ ಗುಜರಾತ್ ಜನರನ್ನು ರಕ್ಷಿಸುತ್ತೇವೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ತಮ್ಮ ಪಕ್ಷವು ಗುಜರಾತ್ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸುತ್ತದೆ ಮತ್ತು ಬಿಜೆಪಿಯ "ಡಬಲ್ ಇಂಜಿನ್" ನ "ವಂಚನೆ"ಯಿಂದ ಅವರನ್ನು ರಕ್ಷಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.

ನವದೆಹಲಿ: ತಮ್ಮ ಪಕ್ಷವು ಗುಜರಾತ್ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸುತ್ತದೆ ಮತ್ತು ಬಿಜೆಪಿಯ "ಡಬಲ್ ಇಂಜಿನ್" ನ "ವಂಚನೆ"ಯಿಂದ ಅವರನ್ನು ರಕ್ಷಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.
'500 ರೂ.ಗಳಲ್ಲಿ ಎಲ್‌ಪಿಜಿ ಸಿಲಿಂಡರ್, ಯುವಕರಿಗೆ 10 ಲಕ್ಷ ಉದ್ಯೋಗ, 3 ಲಕ್ಷದವರೆಗೆ ರೈತರ ಸಾಲ ಮನ್ನಾ ಸೇರಿದಂತೆ ನಾವು ಗುಜರಾತ್‌ನ ಜನರಿಗೆ ಮಾಡಿದ 'ಕಾಂಗ್ರೆಸ್‌ನಾ8 ವಚನ'ವನ್ನು ಈಡೇರಿಸುತ್ತೇವೆ' ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
'ಪಕ್ಷವು ಬಿಜೆಪಿಯ 'ಡಬಲ್ ಇಂಜಿನ್' ನ ಮೋಸದಿಂದ ನಿಮ್ಮನ್ನು ರಕ್ಷಿಸುತ್ತದೆ. ರಾಜ್ಯದಲ್ಲಿ 'ಬದಲಾವಣೆಯ ಹಬ್ಬ' ಆಚರಿಸುತ್ತದೆ' ಎಂದು ಕಾಂಗ್ರೆಸ್ ಮಾಜಿ ಮುಖ್ಯಸ್ಥರು ಹೇಳಿದರು.
ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.
ಕಾಂಗ್ರೆಸ್, ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷಗಳು ಮತದಾರರನ್ನು ಓಲೈಸಲು ಮುಂದಾಗಿದ್ದು, ತ್ರಿಕೋನ ಸ್ಫರ್ಧೆ ಏರ್ಪಡುವ ಸಾಧ್ಯತೆಯಿದೆ.
2017ರ ಚುನಾವಣೆಯಲ್ಲಿ ಒಟ್ಟು 182 ಸ್ಥಾನಗಳಲ್ಲಿ ಬಿಜೆಪಿ 99 ಮತ್ತು ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


