ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10 ಮೀಸಲಾತಿ ಎತ್ತಿ ಹಿಡಿದ ಸುಪ್ರೀಂ ಕೋರ್ಟ್
ಮುಂದುವರೆದ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕೇಂದ್ರೀಯ ಸಂಸ್ಥೆಗಳು ಮತ್ತು ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಕಲ್ಪಿಸುವ ಸಂವಿಧಾನದ 103ನೇ ತಿದ್ದುಪಡಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ.

ನವದೆಹಲಿ: ಮುಂದುವರೆದ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕೇಂದ್ರೀಯ ಸಂಸ್ಥೆಗಳು ಮತ್ತು ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಕಲ್ಪಿಸುವ ಸಂವಿಧಾನದ 103ನೇ ತಿದ್ದುಪಡಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ.
ಸಾಮಾನ್ಯ ವರ್ಗಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ. 10 ರಷ್ಟು ಮೀಸಲಾತಿ ಒದಗಿಸುವ ಸಂವಿಧಾನದ 103ನೇ ತಿದ್ದುಪಡಿ ಮಾನ್ಯತೆಯನ್ನು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರನ್ನೊಳಗೊಂಡ ಸಾಂವಿಧಾನಿಕ ಪೀಠ ಮೂರನೇ ಎರಡರಷ್ಟು ಬಹುಮತದೊಂದಿಗೆ ಎತ್ತಿ ಹಿಡಿದಿದೆ.
ನಾಲ್ವರು ನ್ಯಾಯಾಧೀಶರು ಈ ಕಾಯ್ದೆ ಪರವಾಗಿ ವಾದಿಸಿದರೆ, ಮತ್ತೋರ್ವರು ವಿರುದ್ಧವಾಗಿ ವಾದಿಸಿದ್ದಾರೆ. ತೀರ್ಪನ್ನು ಓದಿದ ನ್ಯಾಯಾಧೀಶ ಮಹೇಶ್ವರಿ, ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ. 10 ರಷ್ಟು ಮೀಸಲಾತಿ ಒದಗಿಸುವುದರಿಂದ ಸಂವಿಧಾನದ ಮೂಲ ರಚನೆ ಉಲ್ಲಂಘಿಸುವುದಿಲ್ಲ ಎಂದರು.
ಮೀಸಲಾತಿ ನೀತಿಯನ್ನು ಪುನರ್ ಪರಿಶೀಲಿಸಬೇಕಾದ ಅಗತ್ಯವಿದೆ ಎಂದು ನ್ಯಾಯಾಧೀಶರಾದ ತ್ರಿವೇದಿ ಮತ್ತು ಪಾರ್ದಿವಾಲಾ ಹೇಳಿದರು. ಆದಾಗ್ಯೂ, ನ್ಯಾಯಾಧೀಶರಾದ ಎಸ್. ರವೀಂದ್ರ ಭಟ್ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ. 10 ರಷ್ಟು ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿದರು. ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಬಡವರನ್ನು ಇದರಿಂದ ಹೊರಗಿಡುವುದು ತಾರತಮ್ಯವಾಗುತ್ತದೆ ಎಂದು ಅಸಮ್ಮತಿ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


