10 ಬಾರಿ ಶಾಸಕರಾಗಿದ್ದ ಗುಜರಾತ್ ಕಾಂಗ್ರೆಸ್ ನಾಯಕ ಮೋಹನ್ ರಾಟ್ವ ಬಿಜೆಪಿ ಸೇರ್ಪಡೆ
ಗುಜರಾತ್ ವಿಧಾನಸಭೆ ಚುನಾವಣೆಗೆ ಮುನ್ನ ಪ್ರತಿಪಕ್ಷ ಕಾಂಗ್ರೆಸ್‌ಗೆ ತೀವ್ರ ಆಘಾತ ನೀಡಿದ ಹಿರಿಯ ಶಾಸಕ ಮೋಹನ್ ಸಿನ್ಹಾ ರಾಟ್ವ ಅವರು ಮಂಗಳವಾರ ಪಕ್ಷದ ಸದಸ್ಯತ್ವ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ...

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಗೆ ಮುನ್ನ ಪ್ರತಿಪಕ್ಷ ಕಾಂಗ್ರೆಸ್‌ಗೆ ತೀವ್ರ ಆಘಾತ ನೀಡಿದ ಹಿರಿಯ ಶಾಸಕ ಮೋಹನ್ ಸಿನ್ಹಾ ರಾಟ್ವ ಅವರು ಮಂಗಳವಾರ ಪಕ್ಷದ ಸದಸ್ಯತ್ವ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ಸೇರ್ಪಡೆಯಾಗಿದ್ದಾರೆ.
78 ವರ್ಷದ ರಾಟ್ವ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಜಗದೀಶ್ ಠಾಕೋರ್ ಅವರಿಗೆ ಕಳುಹಿಸಿದ್ದಾರೆ.
ಪ್ರಮುಖ ಬುಡಕಟ್ಟು ನಾಯಕ, ರಾಟ್ವ ಅವರು ಕಾಂಗ್ರೆಸ್ ನಿಂದ ಹತ್ತು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ ಮತ್ತು ಪ್ರಸ್ತುತ ಮಧ್ಯ ಗುಜರಾತ್‌ನ ಛೋಟಾ ಉದಯಪುರ(ST) ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
2012ಕ್ಕೂ ಮೊದಲು ರಾಟ್ವ ಅವರು ಛೋಟಾ ಉದೇಪುರ್ ಜಿಲ್ಲೆಯ ಪಾವಿ-ಜೆಟ್ಪುರ್(ST) ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.
ಇತ್ತೀಚೆಗಷ್ಟೇ, ಮುಂದಿನ ತಿಂಗಳ ವಿಧಾನಸಭಾ ಚುನಾವಣೆಗೆ ತಾನು ಟಿಕೆಟ್ ಬಯಸುವುದಿಲ್ಲ ಎಂದು ರಾಟ್ವ ಘೋಷಿಸಿದ್ದರು. ಹೀಗಾಗಿ ಕಾಂಗ್ರೆಸ್ ಅವರ ಸ್ಥಾನದಿಂದ ಅವರ ಮಗ ರಾಜೇಂದ್ರ ಸಿನ್ಹಾ ರಾಟ್ವ ಅವರನ್ನು ಕಣಕ್ಕಿಳಿಸಲು ಬಯಸಿತ್ತು.
ಕಾಂಗ್ರೆಸ್ ನ ರಾಜ್ಯಸಭಾ ಸದಸ್ಯ ನರನ್ ರಾಟ್ವ ಅವರು ಸಹ ಇದೇ ಕ್ಷೇತ್ರದಿಂದ ತಮ್ಮ ಮಗನಿಗೆ ಟಿಕೆಟ್ ಕೇಳಿದ್ದಾರೆ ಎನ್ನಲಾಗಿದೆ.
ಗುಜರಾತ್ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


