ದೇಶ

ಶಿವಸೇನೆ ನಾಯಕ ಸಂಜಯ್ ರಾವುತ್‌ಗೆ ಜಾಮೀನು ಮಂಜೂರು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಹಿರಿಯ ನಾಯಕ ಮತ್ತು ಅವರ ಆಪ್ತರಲ್ಲಿ ಒಬ್ಬರಾದ ಸಂಜಯ್ ರಾವುತ್ ಅವರಿಗೆ ವಿಶೇಷ ನ್ಯಾಯಾಲಯವು ಇಂದು ಜಾಮೀನು ಮಂಜೂರು ಮಾಡಿದೆ.

ಶಿವಸೇನೆ ನಾಯಕ ಸಂಜಯ್ ರಾವುತ್‌ಗೆ ಜಾಮೀನು ಮಂಜೂರು
ಸಂಜಯ್ ರಾವುತ್
Published On :

ಮುಂಬೈ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಹಿರಿಯ ನಾಯಕ ಮತ್ತು ಅವರ ಆಪ್ತರಲ್ಲಿ ಒಬ್ಬರಾದ ಸಂಜಯ್ ರಾವುತ್ ಅವರಿಗೆ ವಿಶೇಷ ನ್ಯಾಯಾಲಯವು ಇಂದು ಜಾಮೀನು ಮಂಜೂರು ಮಾಡಿದೆ.

ರಾಜ್ಯಸಭಾ ಸದಸ್ಯರಾಗಿರುವ ಫೈರ್‌ಬ್ರಾಂಡ್ ನಾಯಕ ಎಂದೇ ಗುರುತಿಸಿಕೊಂಡಿರುವ ರಾವುತ್, ಕಳೆದ ಮೂರೂವರೆ ತಿಂಗಳಿನಿಂದ ಜೈಲಿನಲ್ಲಿದ್ದರು.

ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಲಯ ಜಾಮೀನು ಅರ್ಜಿಯ ಆದೇಶವನ್ನು ಅಕ್ಟೋಬರ್ 21 ರಂದು ಕಾಯ್ದಿರಿಸಿತ್ತು.

ಮುಂಬೈನ ವಸತಿ ಕಾಲೋನಿಯ ಪುನರಾಭಿವೃದ್ಧಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಂಜಯ್ ರಾವುತ್ ಅವರನ್ನು ಆಗಸ್ಟ್ 1 ರಂದು ಜಾರಿ ನಿರ್ದೇಶನಾಲಯವು (ಇ.ಡಿ) ಕಸ್ಟಡಿಗೆ ತೆಗೆದುಕೊಂಡಿತ್ತು.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿಯಲ್ಲಿ ಬಂಧಿಸುವ ಮೊದಲು, ರಾಜ್ಯಸಭಾ ಸಂಸದರು ಎರಡು ಬಾರಿ ಏಜೆನ್ಸಿಯ ಸಮನ್ಸ್‌ನಿಂದ ದೂರವುಳಿದಿದ್ದರು.

ರಾಜಕೀಯ ದ್ವೇಷದಿಂದ ತಮ್ಮ ವಿರುದ್ಧ ಸುಳ್ಳು ಪ್ರಕರಣವನ್ನು ಸಿದ್ಧಪಡಿಸಲಾಗಿದೆ ಎಂದು ರಾವುತ್ ಆರೋಪಿಸಿದ್ದರು.

ಉದ್ಧವ್ ಠಾಕ್ರೆ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣಗಳ ನಡುವೆ ಶಿವಸೇನೆಯ ನಿಯಂತ್ರಣಕ್ಕಾಗಿ ತೀವ್ರ ಜಟಾಪಟಿ ನಡೆಯುತ್ತಿರುವ ನಡುವೆಯೇ ರಾಜ್ಯಸಭಾ ಸಂಸದರ ಬಂಧನವಾಗಿತ್ತು.

ರಾವುತ್ ಅವರು ಠಾಕ್ರೆ ಬಣದ ಧ್ವನಿಯಾಗಿದ್ದರು ಮತ್ತು ಶಿವಸೇನೆಯೊಳಗಿನ ಬಂಡಾಯವು ಉದ್ಧವ್ ಠಾಕ್ರೆ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ ನಂತರ ಶಿಂಧೆ ಪಾಳಯವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದರ ವಿರುದ್ಧ ಧ್ವನಿ ಎತ್ತಿದ್ದರು.

ಅವರ ಬಂಧನದ ನಂತರ, ಮುಖ್ಯಮಂತ್ರಿ ಶಿಂಧೆ, ಸಂಜಯ್ ರಾವುತ್ ನಿರಪರಾಧಿಯಾಗಿದ್ದರೆ, ಅವರ ವಿರುದ್ಧ ಕೇಂದ್ರದ ತನಿಖಾ ಸಂಸ್ಥೆಗಳ ತನಿಖೆಗೆ  ಹೆದರಬೇಕಾಗಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.