ದೇಶ

ಗುಜರಾತ್ ಚುನಾವಣೆ: ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆ

ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರು ಮುಂದಿನ ತಿಂಗಳು ನಡೆಯಲಿರುವ ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಪಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ಬುಧವಾರ...

ಗುಜರಾತ್ ಚುನಾವಣೆ: ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆ
ಪ್ರಧಾನಿ ಮೋದಿ ಜತೆ ರವೀಂದ್ರ ಜಡೇಜಾ ಹಾಗೂ ಪತ್ನಿ
Published On :

ಅಹಮದಾಬಾದ್: ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರು ಮುಂದಿನ ತಿಂಗಳು ನಡೆಯಲಿರುವ ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಪಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

2019 ರ ಲೋಕಸಭೆ ಚುನಾವಣೆಯ ನಂತರ ಬಿಜೆಪಿ ಸೇರಿದ ರಿವಾಬಾ ಅವರು, ಜಾಮ್‌ನಗರ ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಹಾಲಿ ಶಾಸಕ ಧರ್ಮೇಂದ್ರ ಸಿಂಗ್ ಜಡೇಜಾ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ.

ಆದರೆ, ಯಾವುದೂ ಅಂತಿಮಗೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.

ಶೀಘ್ರದಲ್ಲೇ ಕೇಸರಿ ಪಕ್ಷ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸುವ ನಿರೀಕ್ಷೆಯಿದೆ. ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅವರು ಮಂಗಳವಾರ ದೆಹಲಿಯಲ್ಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ರಾಜ್ಯ ಘಟಕದ ಮುಖ್ಯಸ್ಥ ಸಿಆರ್ ಪಾಟೀಲ್ ಅವರೊಂದಿಗೆ ಚರ್ಚಿಸಿದ್ದಾರೆ.

ಇಂದು ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ.

ಬಿಜೆಪಿ ಪಕ್ಷ ಸಂಘಟನೆಗೆ ಹೊಸ ಶಕ್ತಿಯನ್ನು ತುಂಬಲು ಕೆಲವು ಹಿರಿಯ ನಾಯಕರನ್ನು ಕೈಬಿಡಬಹುದು ಎಂದು ಪಿಟಿಐ ಸುದ್ದಿ ಸಂಸ್ಥೆಗೆ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.