ಸುಪ್ರೀಂ ಕೋರ್ಟ್ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ಪ್ರಮಾಣ ಸ್ವೀಕಾರ
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬೆಳಗ್ಗೆ 10:00 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಚಂದ್ರಚೂಡ್ ಅವರು ನವೆಂಬರ್ 10, 2024 ರವರೆಗೆ ಅಧಿಕಾರಾವಧಿ ಹೊಂದಿರುತ್ತಾರೆ. ಸುಪ್ರೀಂಕೋರ್ಟ್ ನ್ಯಾಯಾಧೀಶರು 65ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ. ನ್ಯಾ.ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ನ 2ನೇ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದಾರೆ. ಅವರ ತಂದೆ ನ್ಯಾ. ವೈ.ವಿ ಚಂದ್ರಚೂಡ್ ಅವರು ಫೆಬ್ರವರಿ 2, 1978 ರಿಂದ ಜುಲೈ 11, 1985 ರವರೆಗೆ ಭಾರತದ 16 ನೇ ಮುಖ್ಯ ನ್ಯಾಯಮೂರ್ತಿಯಾಗಿದ್ದರು.
ನ.11, 1959 ರಂದು ಜನಿಸಿದ ನ್ಯಾ.ಚಂದ್ರಚೂಡ್ ಅವರು ಮೇ 13, 2016 ರಂದು ಸುಪ್ರೀಂ ಕೋರ್ಟ್ನ ನ್ಯಾಯಾಧೀಶರಾಗಿ ನೇಮಕಗೊಂಡರು. ಅವರು ಅ.31, 2013 ರಿಂದ ಸುಪ್ರೀಂ ಕೋರ್ಟ್ಗೆ ನೇಮಕಗೊಳ್ಳುವವರೆಗೆ ಅಲಹಾಬಾದ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


