ಗುಜರಾತ್ ಚುನಾವಣೆ: ಜಾಮ್ ನಗರ ಉತ್ತರ ಕ್ಷೇತ್ರದಿಂದ ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ರಿವಾಬ ಅಖಾಡಕ್ಕೆ!
ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಪ್ರಕಟವಾಗಿದ್ದು, ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬ ಜಾಮ್ ನಗರ ಉತ್ತರ ಕ್ಷೇತ್ರದಿಂದ ಅಖಾಡಕ್ಕಿಳಿಯಲು ಬಿಜೆಪಿ ಟಿಕೆಟ್ ಸಿಕ್ಕಿದೆ.

ಜಾಮ್ ನಗರ: ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಪ್ರಕಟವಾಗಿದ್ದು, ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬ ಜಾಮ್ ನಗರ ಉತ್ತರ ಕ್ಷೇತ್ರದಿಂದ ಅಖಾಡಕ್ಕಿಳಿಯಲು ಬಿಜೆಪಿ ಟಿಕೆಟ್ ಸಿಕ್ಕಿದೆ.
ರಿವಾಬ 2019ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಕಳೆದ ಕೆಲವು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯವಾಗಿರುವ ಅವರು, ತಳಮಟ್ಟದಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ರವೀಂದ್ರ ಜಡೇಜಾ ಹಾಗೂ ರಿವಾಬ ಚಾರಿಟಿ ಕಾರ್ಯಗಳಿಗೆ ಹೆಸರುವಾಸಿಯಾಗಿದ್ದಾರೆ.
ಕಳೆದ ವರ್ಷ ತಮ್ಮ ಮಗಳ 5ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ 101 ಬಾಲಕಿಯರಿಗೆ ಸುಕನ್ಯಾ ಸಮೃದ್ದಿ ಬ್ಯಾಂಕ್ ಖಾತೆಗಳನ್ನು ತೆರೆಯುವ ಮೂಲಕ ಅವರು ಸುದ್ದಿಯಾಗಿದ್ದರು. ಹೆಣ್ಣು ಮಕ್ಕಳು ಆರ್ಥಿಕವಾಗಿ ಸಬಲರಾಗಲು ನೆರವು ಹಾಗೂ ಅರಿವು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕೂಡಾ ರಿವಾಬ್ ಅವರಿಗೆ ಪತ್ರ ಬರೆುವ ಮೂಲಕ ಅವರ ಚಾರಿಟಿ ಕೆಲಸಗಳನ್ನು ಕೊಂಡಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


