ಜಮ್ಮು-ಕಾಶ್ಮೀರ: ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಸಹಚರ ಸೇರಿ ಮೂವರ ಬಂಧನ
ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಸಹಚರ ಸೇರಿ ಮೂವರನ್ನು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಸಹಚರ ಸೇರಿ ಮೂವರನ್ನು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತರಿಂದ ಪೊಲೀಸರು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.
ಬಂಧಿತರನ್ನು ಪುಚಿಲ್ ಪಂಪೋರಾದ ಚಾಲಕ ಮೊಹಮ್ಮದ್ ಯಾಸೀನ್, ಫರ್ಹಾನ್ ಫಾರೂಕ್ ಮತ್ತು ಡ್ರಂಗ್ಬಾಲ್ ಪಾಂಪೋರ್‌ನ ಫಾರೂಕ್ ಅಹ್ಮದ್ ಎಂದು ಗುರುತಿಸಲಾಗಿದೆ.
ಮಂಗಳವಾರ ಮತ್ತು ಬುಧವಾರದ ಮಧ್ಯರಾತ್ರಿ ತ್ರಿಕೂಟ ನಗರ ಠಾಣೆಯ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಕ್ಲಿಯರ್ ಮಾಡುತ್ತಿದ್ದ ವೇಳೆ ನರ್ವಾಲ್‌ನಲ್ಲಿ ತೈಲ ಟ್ಯಾಂಕರ್ ವೊಂದನ್ನು ತೆಡೆದಿದ್ದಾರೆ.
ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಭೀಕರ ರಸ್ತೆ ಅಪಘಾತ: 2 ಬಸ್'ಗಳು ಮುಖಾಮುಖಿ ಡಿಕ್ಕಿ, 3 ಸಾವು, 17ಕ್ಕೂ ಹೆಚ್ಚು ಮಂದಿಗೆ ಗಾಯ
ಈ ವೇಳೆ ಚಾಲಕನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ತನ್ನು ಇಬ್ಬರು ಸಹಚರರೊಂದಿಗೆ ಪೊಲೀಸರೊಂದಿಗೆ ಜಗಳಕ್ಕಿಳಿದಿದ್ದಾನೆ. ಈ ಹಿನ್ನೆಲೆಯಲ್ಲಿ ಮೂವರನ್ನು ಪೊಲೀಸರು ಠಾಣೆಗೆ ಕರೆದೊಯ್ದಿದ್ದಾರೆ
ವಿಚಾರಣೆಯ ವೇಳೆ ಮೂವರ ಪೈಕಿ ಓರ್ವ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವನೆಂದು ತಿಳಿದುಬಂದಿದೆ. ಪಾಕಿಸ್ತಾನದಲ್ಲಿರುವ ಜೆಎಂನ ಹ್ಯಾಂಡ್ಲರ್ ಶಹಬಾಜ್ ಸೂಚನೆಯ ಮೇರೆಗೆ ಶಸ್ತ್ರಾಸ್ತ್ರಗಳನ್ನು ತೆಗೆದುಕೊಳ್ಳಲು ಜಮ್ಮುವಿಗೆ ಬಂದಿರುವುದಾಗಿ ಚಾಲಕ ಯಾಸೀನ್ ಬಹಿರಂಗಪಡಿಸಿದ್ದಾನೆ.
ತೈಲ ಟ್ಯಾಂಕರ್‌ನಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ರವಾನೆಯನ್ನು ಮಾಡುತ್ತಿದ್ದ ಬಗ್ಗೆ ಯಾಸೀನ್ ತಪ್ಪೊಪ್ಪಿಕೊಂಡಿದ್ದಾನೆ.
ಇದರ ನಂತರ, ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಟ್ಯಾಂಕರ್ನ್ನು ಮತ್ತೊಮ್ಮೆ ಶೋಧಿಸಲಾಯಿತು ಈ ವೇಳೆ ಟ್ಯಾಂಕರ್ ನಲ್ಲಿ ಮೂರು ಎಕೆ -56 ರೈಫಲ್ಗಳು, ಒಂದು ಪಿಸ್ತೂಲ್, ಒಂಬತ್ತು ಮ್ಯಾಗಜೀನ್ಗಳು, 191 ಸುತ್ತಿನ ಮದ್ದುಗುಂಡುಗಳು ಮತ್ತು ಆರು ಗ್ರೆನೇಡ್ಗಳು ದೊರೆತಿದ್ದು, ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳು ಇತರೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ಹಾಗೂ ಅವರ ಪೂರ್ವಾಪರಗಳನ್ನು ತಿಳಿದುಕೊಳ್ಳಲು ಉನ್ನತ ಮಟ್ಟದ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


