ಭಾರತ್ ಜೋಡೋ ಯಾತ್ರೆ ದೇಶವನ್ನು ಒಂದುಗೂಡಿಸುವ ಚಳುವಳಿ; ಶರದ್ ಪವಾರ್ ಭೇಟಿ ಬಳಿಕ ಸಂಜಯ್ ರಾವುತ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು "ಕಹಿ ವಾತಾವರಣ"ವನ್ನು ಕೊನೆಗೊಳಿಸಲು ಮತ್ತು ದೇಶವನ್ನು ಒಂದುಗೂಡಿಸಲು ನಡೆಯುತ್ತಿರುವ ಚಳುವಳಿಯಾಗಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವುತ್ ಗುರುವಾರ ಹೇಳಿದ್ದಾರೆ.

ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು "ಕಹಿ ವಾತಾವರಣ"ವನ್ನು ಕೊನೆಗೊಳಿಸಲು ಮತ್ತು ದೇಶವನ್ನು ಒಂದುಗೂಡಿಸಲು ನಡೆಯುತ್ತಿರುವ ಚಳುವಳಿಯಾಗಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವುತ್ ಗುರುವಾರ ಹೇಳಿದ್ದಾರೆ.
ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ನಂತರ ರಾವುತ್ ಸುದ್ದಿಗಾರರೊಂದಿಗೆ ಮಾತನಾಡಿದರು.
'ಭಾರತ್ ಜೋಡೋ ಯಾತ್ರೆಯು ದೇಶವನ್ನು ಒಗ್ಗೂಡಿಸುವ ಮತ್ತು ಕಹಿ ವಾತಾವರಣವನ್ನು ಕೊನೆಗೊಳಿಸುವ ಆಂದೋಲನವಾಗಿದೆ. ಇದನ್ನು ಸ್ವಾಗತಿಸಬೇಕು ಎಂದ ಅವರು, ಪವಾರ್ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದೇನೆ ಎಂದು ಸೇನಾ ನಾಯಕ ಹೇಳಿದರು.
ರಾಜ್ಯಸಭಾ ಸದಸ್ಯ ರಾವುತ್ ಅವರು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಮೂರು ತಿಂಗಳ ನಂತರ ಬುಧವಾರ (ನ.09) ಜಾಮೀನಿನ ಮೇಲೆ ಬಿಡುಗಡೆಯಾದರು.
ಜಾಮೀನು ನೀಡುವ ವೇಳೆ ನ್ಯಾಯಾಲಯ ಹೇಳಿದ್ದಿಷ್ಟು...
ರಾಯಗಢ ಜಿಲ್ಲೆಯ ಆಲಿಬಾಗ್ ಬಳಿಯ ಕಿಹಿಮ್‌ನಲ್ಲಿ ಪ್ಲಾಟ್‌ಗಳನ್ನು ಖರೀದಿಸಲು ಶಿವಸೇನಾ ಸಂಸದ ಸಂಜಯ್ ರಾವುತ್ ಅವರು ಕೆಲವು 'ಲೆಕ್ಕದಲ್ಲಿಲ್ಲದ ಹಣವನ್ನು' ವ್ಯವಹರಿಸಿದ್ದಾರೆ. ಆದರೆ, ನಿಬಂಧನೆಗಳ ಅಡಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಗ ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ಮುಂಬೈ ವಿಶೇಷ ನ್ಯಾಯಾಲಯ ಹೇಳಿದೆ.
ವಿಶೇಷ ಪಿಎಂಎಲ್‌ಎ ನ್ಯಾಯಾಲಯದ ನ್ಯಾಯಾಧೀಶ ಎಂ.ಜಿ. ದೇಶಪಾಂಡೆ ಅವರು, ಆಗಸ್ಟ್ 1 ರಂದು ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧಿಸಲ್ಪಟ್ಟ ಸಂಜಯ್ ರಾವುತ್ ಅವರಿಗೆ ಪತ್ರಾ ಚಾಲ್ ಪುನರಾಭಿವೃದ್ಧಿ ಯೋಜನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ನೀಡುವಾಗ ಬುಧವಾರ ಈ ಹೇಳಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


