ಶಿವಾಜಿ ಊಟದಲ್ಲಿ ವಿಷ ಹಾಕಿದ್ದಕ್ಕೆ ಸಂಭಾಜಿಯನ್ನ ಬ್ರಿಟಿಷರು ಹತ್ಯೆ ಮಾಡಿದ್ರು: ನಾನ್‌ಸೆನ್ಸ್ ಹೇಳಿಕೆಯನ್ನು ನೀವು ಒಪ್ಪುತ್ತೀರಾ ರಾಹುಲ್ ಗಾಂಧಿ ಅವರೇ?
‘ಹಿಂದೂ’ ಎಂಬ ಪದಕ್ಕೆ ಕೆಟ್ಟ ಅರ್ಥಗಳಿವೆ ಎಂದು ಹೇಳುವ ಮೂಲಕ ದೇಶವ್ಯಾಪಿ ವಿರೋಧಕ್ಕೆ ಕಾರಣವಾಗಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಸುತ್ತ ಈಗ ಮತ್ತೊಂದು ವಿವಾದ ಸುತ್ತಿಕೊಂಡಿದೆ.

ಬೆಳಗಾವಿ: ‘ಹಿಂದೂ’ ಎಂಬ ಪದಕ್ಕೆ ಕೆಟ್ಟ ಅರ್ಥಗಳಿವೆ ಎಂದು ಹೇಳುವ ಮೂಲಕ ದೇಶವ್ಯಾಪಿ ವಿರೋಧಕ್ಕೆ ಕಾರಣವಾಗಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಸುತ್ತ ಈಗ ಮತ್ತೊಂದು ವಿವಾದ ಸುತ್ತಿಕೊಂಡಿದೆ.
ನಿಪ್ಪಾಣಿಯಲ್ಲಿ ನಡೆದ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿದ ಮತ್ತೊಂದು ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದೆ.
ಧರ್ಮವೀರ ಸಂಭಾಜಿ ಮಹಾರಾಜರನ್ನ ಬ್ರಿಟಿಷರು ಹಿಡಿದು ಹತ್ಯೆ ಮಾಡಿದರು ಎಂದಿರುವ ಸತೀಶ ಜಾರಕಿಹೊಳಿ ವಿಡಿಯೋವನ್ನು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡು ಈ ರೀತಿಯ ನಾನ್‌ಸೆನ್ಸ್ ಹೇಳಿಕೆಯನ್ನು ನೀವು ಒಪ್ಪುತ್ತೀರಾ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.
ನಿಪ್ಪಾಣಿಯಲ್ಲಿ ನವೆಂಬರ್ 6ರಂದು ನಡೆದ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಧರ್ಮವೀರ ಸಂಭಾಜಿ ಮಹಾರಾಜರನ್ನ ಬ್ರಿಟಿಷರು ಹಿಡಿದು ಹತ್ಯೆ ಮಾಡಿದರು ಎಂದಿದ್ದಾರೆ. ಧರ್ಮವೀರ ಮಹಾರಾಜರನ್ನು ಏಕೆ ಹತ್ಯೆ ಮಾಡಿದರು? ಅವರು ಶಿವಾಜಿ ಮಹಾರಾಜರ ಊಟದಲ್ಲಿ ವಿಷ ಹಾಕಿದ್ದರು. ಹೀಗಾಗಿ ಅವರನ್ನು ಹಿಡಿದು ಬ್ರಿಟಿಷರ ಹತ್ಯೆ ಮಾಡಿದರು ಎಂದಿದ್ದಾರೆ.
ಇದನ್ನೂ ಓದಿ: ಒತ್ತಡದಿಂದಲ್ಲ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಬಾರದೆಂಬ ಉದ್ದೇಶದಿಂದ ಹೇಳಿಕೆ ವಾಪಸ್ ಪಡೆದೆ: ಸತೀಶ್ ಜಾರಕಿಹೊಳಿ
ಸದ್ಯ ಸತೀಶ್ ಜಾರಕಿಹೊಳಿ ನೀಡಿದ ವಿವಾದಾತ್ಮಕ ಹೇಳಿಕೆಯ 42 ಸೆಕೆಂಡ್ಗಳುಳ್ಳ ಈ ವಿಡಿಯೋ ವೈರಲ್ ಆಗುತ್ತಿದೆ. ಭಾಷಣದ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಅವರು ಈ ರೀತಿಯ ನಾನ್‌ಸೆನ್ಸ್ ಹೇಳಿಕೆಯನ್ನು ನೀವು ಒಪ್ಪುತ್ತೀರಾ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪ್ರಶ್ನೆ ಮಾಡಿದ್ದಾರೆ.
ಕಾಂಗ್ರೆಸ್‌ನ ಎಂಎಲ್‌ಎ ಒಬ್ಬರು ಈ ರೀತಿ ಮಹಾನ್ ನಾಯಕ ಸಂಭಾಜಿ ಮಹಾರಾಜರ ಬಗ್ಗೆ ಹೇಳುವುದನ್ನು ನೀವು ಒಪ್ಪುತ್ತೀರಾ? ಸಂಭಾಜಿ ಮಹಾರಾಜರ ಬಗ್ಗೆ ತಪ್ಪು ಮಾಹಿತಿ ನೀಡುವ, ದಾರಿ ತಪ್ಪಿಸುವ, ಅವಮಾನ ಮಾಡುವ ಹೇಳಿಕೆ ಇದು ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಇದು ನಿಮ್ಮ ಕಾಂಗ್ರೆಸ್ ಪಕ್ಷದ ಅಧಿಕೃತ ಹೇಳಿಕೆಯೇ ಮಿಸ್ಟರ್ ರಾಹುಲ್ ಎಂದು ಪ್ರಶ್ನಿಸಿದ್ದಾರೆ. ಮಹಾರಾಷ್ಟ್ರವು ಇದನ್ನು ಒಪ್ಪುವುದಿಲ್ಲ ಎಂದೂ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


