ಗುಜರಾತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯಲ್ಲಿ 21 ಹಾಲಿ ಶಾಸಕರಿಗೆ ಟಿಕೆಟ್
ಗುಜರಾತ್ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ 46 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಇಂದು ಬಿಡುಗಡೆ ಮಾಡಿದ್ದು, 21 ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ. ನಾಲ್ವರು ಮುಸ್ಲಿಂ ಅಭ್ಯರ್ಥಿಗಳಿದ್ದಾರೆ.

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ 46 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಇಂದು ಬಿಡುಗಡೆ ಮಾಡಿದ್ದು, 21 ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ. ನಾಲ್ವರು ಮುಸ್ಲಿಂ ಅಭ್ಯರ್ಥಿಗಳಿದ್ದಾರೆ.
ಒಟ್ಟು 182 ಸ್ಥಾನಗಳುಳ್ಳ ಗುಜರಾತ್ ವಿಧಾನಸಭೆಯ 89 ಸ್ಥಾನಗಳಿಗೆ ಡಿಸೆಂಬರ್ 1 ರಂದು ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 4 ರಂದು 43 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು. ಇದರಲ್ಲಿ ಮೊದಲ ಹಾಗೂ ಎರಡನೇ ಹಂತದ ಚುನಾವಣೆ ನಡೆಯಲಿರುವ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿತ್ತು. ಆದರೆ, ಎರಡನೇ ಪಟ್ಟಿಯಲ್ಲಿ ಪ್ರಕಟಿಸಿರುವ ಎಲ್ಲಾ 46 ಅಭ್ಯರ್ಥಿಗಳು ಮೊದಲ ಹಂತದ ಚುನಾವಣೆಯಲ್ಲಿ ಅಖಾಡಕ್ಕಿಳಿಯಲಿದ್ದಾರೆ.
ಕಾಂಗ್ರೆಸ್ ಈವರೆಗೂ ಮೊದಲ ಹಂತದ 68 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇನ್ನೂ 21 ಸ್ಥಾನಗಳಿಗೆ ಹೆಸರು ಪ್ರಕಟಿಸಬೇಕಾಗಿದೆ. ಮೊದಲ ಹಂತದಲ್ಲಿ 89 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗಾಗಿ ಬಿಜೆಪಿ 84 ಅಭ್ಯರ್ಥಿಗಳನ್ನು ಪ್ರಕಟಿಸಿದೆ.
ಡಿಸೆಂಬರ್ 1 ಮತ್ತು 5 ರಂದು ಎರಡು ಹಂತದಲ್ಲಿ ಗುಜರಾತ್ ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತಗಳ ಎಣಿಕೆ ಪ್ರಕ್ರಿಯೆ ನಡೆದು ಅಂದೇ ಫಲಿತಾಂಶ ಹೊರಬೀಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


