ನೇಪಾಳದಲ್ಲಿ 5.4 ತೀವ್ರತೆಯ ಭೂಕಂಪ, ದೆಹಲಿ, ಎನ್ ಸಿಆರ್ ನಲ್ಲೂ ಕಂಪಿಸಿದ ಭೂಮಿ
ನೆರೆಯ ನೇಪಾಳದಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ 5.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ಪ್ರದೇಶದ ಸುತ್ತಮುತ್ತಲಿನ ನಗರಗಳಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ.

ನವದೆಹಲಿ: ನೆರೆಯ ನೇಪಾಳದಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ 5.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ಪ್ರದೇಶದ ಸುತ್ತಮುತ್ತಲಿನ ನಗರಗಳಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ.
ಈ ವಾರದಲ್ಲಿ ಎರಡನೇ ಭಾರಿ ಭೂಮಿ ಕಂಪಿಸಿದ್ದು, ಇಂದು ನೋಯ್ಡಾ, ಗುರುಗ್ರಾಮ್, ಹರಿಯಾಣ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಂಜಾಬ್‌ನ ಇತರ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ವರದಿಯಾಗಿದೆ.
ಗಾಬರಿಗೊಂಡ ಜನ ತಮ್ಮ ಮನೆಗಳು ಮತ್ತು ಕಟ್ಟಡಗಳಿಂದ ಹೊರಗೋಡಿ ರಸ್ತೆಗೆ ಬಂದಿದ್ದಾರೆ. ಅಲ್ಲದೆ ಕೆಲವರು ಟ್ವಿಟರ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳ ಮೂಲಕ ಕಂಪನದ ಬಗ್ಗೆ ಮಾಹಿತಿ ನೀಡಿದ್ದಾರೆ.
ನೇಪಾಳ ಭೂಕಂಪನದ ಕೇಂದ್ರಬಿಂದುವಾಗಿದೆ. ರಿಕ್ಟರ್ ಮಾಪನದಲ್ಲಿ 5.4ರ ತೀವ್ರತೆಯ ಭೂಕಂಪನ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ನೇಪಾಳದಲ್ಲಿ ಭೂಮಿಯಿಂದ 10 ಕಿ.ಮೀ. ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂರು ದಿನಗಳ ಹಿಂದಷ್ಟೇ ನೇಪಾಳದಲ್ಲಿ 6.3 ತೀವ್ರತೆಯ ಭೂಕಂಪನ ಸಂಭವಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


