ದೇಶ

ಮಧ್ಯಪ್ರದೇಶ: 56 ವರ್ಷದ ನೆರೆಯ ವ್ಯಕ್ತಿಯಿಂದ ಐದು ವರ್ಷದ ಕಿವುಡ ಮತ್ತು ಮೂಕ ಬಾಲಕಿ ಮೇಲೆ ಅತ್ಯಾಚಾರ

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಐದು ವರ್ಷದ ಕಿವುಡ ಮತ್ತು ಮೂಕ ದಲಿತ ಬಾಲಕಿ ಮೇಲೆ ಆಕೆಯ ನೆರೆಮನೆಯಲ್ಲಿ ವಾಸಿಸುತ್ತಿದ್ದ 56 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮಧ್ಯಪ್ರದೇಶ: 56 ವರ್ಷದ ನೆರೆಯ ವ್ಯಕ್ತಿಯಿಂದ ಐದು ವರ್ಷದ ಕಿವುಡ ಮತ್ತು ಮೂಕ ಬಾಲಕಿ ಮೇಲೆ ಅತ್ಯಾಚಾರ
ಸಾಂದರ್ಭಿಕ ಚಿತ್ರ
Published On :

ಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಐದು ವರ್ಷದ ಕಿವುಡ ಮತ್ತು ಮೂಕ ದಲಿತ ಬಾಲಕಿ ಮೇಲೆ ಆಕೆಯ ನೆರೆಮನೆಯಲ್ಲಿ ವಾಸಿಸುತ್ತಿದ್ದ 56 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕೋಲಾರ ಪ್ರದೇಶದಲ್ಲಿ ಗುರುವಾರ ಸಂಜೆ ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಕೋಲಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಚಂದ್ರಕಾಂತ್ ಪಟೇಲ್ ತಿಳಿಸಿದ್ದಾರೆ.

ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅವರು ಹೇಳಿದರು.

ಪೊಲೀಸರ ಪ್ರಕಾರ, ಗುರುವಾರ ಸಂಜೆ ಆರೋಪಿಯ ಮನೆಯಿಂದ ತಮ್ಮ ಮಗಳ ಕೂಗು ಕೇಳುತ್ತಿದೆ ಎಂದು ನೆರೆಮನೆಯವರು ಬಾಲಕಿಯ ಪೋಷಕರಿಗೆ ತಿಳಿಸಿದ್ದಾರೆ. ಮಗುವಿನ ತಾಯಿ ತಕ್ಷಣವೇ ವ್ಯಕ್ತಿಯ ಮನೆಗೆ ಧಾವಿಸಿದಾಗ ಆರೋಪಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವುದನ್ನು ನೋಡಿ ಆಘಾತಕ್ಕೊಳಗಾಗಿದ್ದಾರೆ ಎಂದು ಅವರು ಹೇಳಿದರು.

ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಮಗು ತನ್ನ ತಾಯಿಯ ಸಹಾಯದಿಂದ ತನಗಾದ ಸಂಕಟವನ್ನು ಪೊಲೀಸರಿಗೆ ವಿವರಿಸಿದೆ.

ಆರೋಪಿಯು ತನ್ನೊಂದಿಗೆ ಆಟವಾಡುವ ನೆಪದಲ್ಲಿ ಆತನ ಮನೆಗೆ ಕರೆದೊಯ್ದಿದ್ದಾನೆ ಎಂದು ಸಂತ್ರಸ್ತೆ ಹೇಳಿದ್ದಾಳೆ. ಪರೀಕ್ಷೆ ನಡೆಸಿದಾಗ ಆರೋಪಿ ಅಪರಾಧ ಎಸಗಿದಾಗ ಪಾನಮತ್ತನಾಗಿದ್ದ ಎಂಬುದು ತಿಳಿದುಬಂದಿದೆ ಪೊಲೀಸರು ತಿಳಿಸಿದ್ದಾರೆ.

ಈ ನಡುವೆ ಆರೋಪಿಯ ಕೋಲಾರದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆಯನ್ನು ಅಧಿಕಾರಿಗಳು ಶುಕ್ರವಾರ ನೆಲಸಮಗೊಳಿಸಿದ್ದಾರೆ. ಮಧ್ಯ ಪ್ರದೇಶದ ಬಿಜೆಪಿ ಸರ್ಕಾರವು ಕಠಿಣ ಸಂದೇಶವನ್ನು ರವಾನಿಸಲು ಘೋರ ಅಫರಾಧಗಳ ಆರೋಪಿಗಳ ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.