4 ದಿನಗಳ ಭೇಟಿಗಾಗಿ ಫ್ರಾನ್ಸ್‌ಗೆ ತೆರಳಿದ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ
ಭಾರತ ಮತ್ತು ಫ್ರೆಂಚ್ ಸೇನೆಗಳ ನಡುವಿನ "ನಂಬಿಕೆಯ ಬಂಧಗಳನ್ನು" ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ನಾಲ್ಕು ದಿನಗಳ ಭೇಟಿಗಾಗಿ ಭಾನುವಾರ ಫ್ರಾನ್ಸ್‌ಗೆ ತೆರಳಿದ್ದಾರೆ.

ನವದೆಹಲಿ: ಭಾರತ ಮತ್ತು ಫ್ರೆಂಚ್ ಸೇನೆಗಳ ನಡುವಿನ "ನಂಬಿಕೆಯ ಬಂಧಗಳನ್ನು" ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ನಾಲ್ಕು ದಿನಗಳ ಭೇಟಿಗಾಗಿ ಭಾನುವಾರ ಫ್ರಾನ್ಸ್‌ಗೆ ತೆರಳಿದ್ದಾರೆ.
ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ನವೆಂಬರ್ 14 ರಿಂದ 17 ರವರೆಗೆ ಫ್ರಾನ್ಸ್‌ಗೆ ನಾಲ್ಕು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸ ಸಂದರ್ಭದಲ್ಲಿ ಅವರು, ಫ್ರಾನ್ಸ್‌ನ ತಮ್ಮ ಸಹವರ್ತಿಗಳು ಮತ್ತು ಹಿರಿಯ ಸೇನಾ ಅಧಿಕಾರಿಗಳೊಂದಿಗೆ ಉಭಯ ದೇಶಗಳ ನಡುವೆ ರಕ್ಷಣಾ ಸಹಕಾರ ವಿಸ್ತರಣೆ ಕುರಿತು ಸಮಾಲೋಚನೆ ನಡೆಸಲಿದ್ದಾರೆ ಎಂದು ಸೇನೆ ತಿಳಿಸಿದೆ.
ಮೊದಲ ಮಹಾಯುದ್ಧದ ಸಮಯದಲ್ಲಿ 4,742 ಭಾರತೀಯ ಸೈನಿಕರ ತ್ಯಾಗವನ್ನು ಸ್ಮರಿಸುವ ನ್ಯೂವ್ ಚಾಪೆಲ್ ಇಂಡಿಯನ್ ಸ್ಮಾರಕಕ್ಕೆ ಜನರಲ್ ಪಾಂಡೆ ಪುಷ್ಪಾರ್ಚನೆ ಮಾಡಲಿದ್ದಾರೆ ಎಂದು ಸೇನೆ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


