ಗುಜರಾತ್ ಚುನಾವಣೆ: ಖಂಭಾಲಿಯಾದಿಂದ ಎಎಪಿ ಸಿಎಂ ಅಭ್ಯರ್ಥಿ ಸ್ಪರ್ಧೆ
ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಈಸುದನ್ ಗಧ್ವಿ ಅವರು ತಮ್ಮ ತವರು ಜಿಲ್ಲೆ ದೇವಭೂಮಿ ದ್ವಾರಕಾದ ಖಂಭಾಲಿಯಾ ಕ್ಷೇತ್ರದಿಂದ...

ಅಹಮದಾಬಾದ್: ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಈಸುದನ್ ಗಧ್ವಿ ಅವರು ತಮ್ಮ ತವರು ಜಿಲ್ಲೆ ದೇವಭೂಮಿ ದ್ವಾರಕಾದ ಖಂಭಾಲಿಯಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಟ್ವೀಟ್ ಮೂಲಕ ಈ ಘೋಷಣೆ ಮಾಡಿದ್ದಾರೆ.
'ರೈತರು, ನಿರುದ್ಯೋಗಿ ಯುವಕರು, ಮಹಿಳೆಯರು, ಉದ್ಯಮಿಗಳ ಪರ ಹಲವು ವರ್ಷಗಳಿಂದ ಧ್ವನಿ ಎತ್ತಿದ ಈಸುದನ್ ಗಧ್ವಿ ಅವರು ಖಂಭಾಲಿಯಾದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ! ಶ್ರೀಕೃಷ್ಣನ ಪುಣ್ಯಭೂಮಿಯಿಂದ ಗುಜರಾತ್‌ಗೆ ಹೊಸ ಮತ್ತು ಉತ್ತಮ ಮುಖ್ಯಮಂತ್ರಿ ಸಿಗುತ್ತಾರೆ' ಎಂದು ದೆಹಲಿ ಮುಖ್ಯಮಂತ್ರಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಗಧ್ವಿ, 'ನೀವು ಮತ್ತು ಗುಜರಾತ್‌ನ ಜನ ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ನನ್ನ ಕೊನೆಯ ಉಸಿರು ಇರುವವರೆಗೂ ಉಳಿಸಿಕೊಳ್ಳುತ್ತೇನೆ ಮತ್ತು ಗುಜರಾತ್‌ನ ಜನರ ಸೇವೆ ಮಾಡುತ್ತೇನೆ ಎಂದು ಭರವಸೆ ನೀಡುವುದಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


