ಪ್ರಸಾರ ಭಾರತಿ ಸಿಇಒ ಆಗಿ ಹಿರಿಯ ಐಎಎಸ್ ಅಧಿಕಾರಿ ಗೌರವ್ ದ್ವಿವೇದಿ ನೇಮಕ
ಹಿರಿಯ ಐಎಎಸ್ ಅಧಿಕಾರಿ ಗೌರವ್ ದ್ವಿವೇದಿ ಅವರನ್ನು ಸೋಮವಾರ ಸಾರ್ವಜನಿಕ ಪ್ರಸಾರಕ ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ನೇಮಿಸಲಾಗಿದೆ.

ನವದೆಹಲಿ: ಹಿರಿಯ ಐಎಎಸ್ ಅಧಿಕಾರಿ ಗೌರವ್ ದ್ವಿವೇದಿ ಅವರನ್ನು ಸೋಮವಾರ ಸಾರ್ವಜನಿಕ ಪ್ರಸಾರಕ ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ನೇಮಿಸಲಾಗಿದೆ.
ದ್ವಿವೇದಿ ಅವರು ಛತ್ತೀಸಗಡ ಕೇಡರ್‌ನ 1995ನೇ ಬ್ಯಾಚ್ ಅಧಿಕಾರಿ. ಇದಕ್ಕೂ ಮುನ್ನ ಇವರು ಸರ್ಕಾರದ MyGovIndia ದಲ್ಲಿ ಸಿಇಒ ಆಗಿದ್ದರು. ದ್ವಿವೇದಿ ಅವರು ಅಧಿಕಾರ ವಹಿಸಿಕೊಂಡ ದಿನದಿಂದ ಐದು ವರ್ಷಗಳ ಅವಧಿಗೆ ಪ್ರಸಾರ ಭಾರತಿಯ ಸಿಇಒ ಆಗಿರುತ್ತಾರೆ. ಇದಕ್ಕೂ ಮುನ್ನ ಶಶಿ ಶೇಖರ್ ವೆಂಪತಿ ಅವರು ಪ್ರಸಾರ ಭಾರತಿಯ ಸಿಇಒ ಆಗಿದ್ದರು.
ಸದ್ಯ ಅವರು ಛತ್ತೀಸ್‌ಗಢ ಸರ್ಕಾರದಲ್ಲಿ ವಾಣಿಜ್ಯ ತೆರಿಗೆಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸೋಮವಾರದಿಂದ ಜಾರಿಗೆ ಬರುವಂತೆ, ಗೌರವ್ ದ್ವಿವೇದಿ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


