ಗುಜರಾತ್ ಚುನಾವಣೆ: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ತರೂರ್ ಗೆ ಇಲ್ಲ ಸ್ಥಾನ
ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಮುಖ್ಯಮಂತ್ರಿಗಳಾದ ಅಶೋಕ್ ಗೆಹ್ಲೋಟ್, ಭೂಪೇಶ್ ಬಾಘೇಲ್, ಶಾಸಕ ಸಚಿನ್ ಪೈಲಟ್, ಜಿಗ್ನೇಶ್ ಮೆವಾನಿ, ಕನ್ಹಯ್ಯಾ ಕುಮಾರ್ ಮತ್ತಿತರ 40 ಮಂದಿ ಸ್ಟಾರ್ ಪ್ರಚಾರಕರಾಗಿದ್ದಾರೆ.
ಈ ಪಟ್ಟಿಯಲ್ಲಿ ಕರ್ನಾಟಕದಿಂದ ಬಿ.ಕೆ. ಹರಿಪ್ರಸಾದ್ ಅವರಿಗೂ ಸ್ಥಾನ ನೀಡಲಾಗಿದೆ. ಆದರೆ, ಇತ್ತೀಚಿಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಶಶಿ ತರೂರ್ ಅವರಿಗೆ ಸ್ಥಾನ ನೀಡಿಲ್ಲ. ಅಲ್ಲದೇ, ಪಟ್ಟಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹೊರತುಪಡಿಸಿದರೆ ನಂತರದ ಮೂರು ಸ್ಥಾನಗಳಲ್ಲಿ ಗಾಂಧಿ ಕುಟುಂಬದವರೇ ಇರುವುದಕ್ಕೆ ಕೆಲವರು ನಾನಾ ರೀತಿಯಲ್ಲಿ ಟೀಕಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


