ಲಖನೌ: ಅಪ್ರಾಪ್ತ ಗೆಳತಿಯನ್ನು ನಾಲ್ಕನೇ ಮಹಡಿಯಿಂದ ತಳ್ಳಿ ಸಾಯಿಸಿದ ಭಗ್ನ ಪ್ರೇಮಿ
ಭಗ್ನ ಪ್ರೇಮಿಯೊಬ್ಬ 17 ವರ್ಷದ ಅಪ್ರಾಪ್ತ ಗೆಳತಿಯನ್ನು ವಸತಿ ಕಟ್ಟಡದ ನಾಲ್ಕನೇ ಮಹಡಿಯಿಂದ ತಳ್ಳಿ ಹತ್ಯೆ ಮಾಡಿರುವ ದಾರುಣ ಘಟನೆ ಉತ್ತರ ಪ್ರದೇಶ ರಾಜಧಾನಿಯಲ್ಲಿ ನಡೆದಿದೆ.

ಲಖನೌ: ಭಗ್ನ ಪ್ರೇಮಿಯೊಬ್ಬ 17 ವರ್ಷದ ಅಪ್ರಾಪ್ತ ಗೆಳತಿಯನ್ನು ವಸತಿ ಕಟ್ಟಡದ ನಾಲ್ಕನೇ ಮಹಡಿಯಿಂದ ತಳ್ಳಿ ಹತ್ಯೆ ಮಾಡಿರುವ ದಾರುಣ ಘಟನೆ ಉತ್ತರ ಪ್ರದೇಶ ರಾಜಧಾನಿಯಲ್ಲಿ ನಡೆದಿದೆ.
ಮಂಗಳವಾರ ರಾತ್ರಿ ದುಬಗ್ಗಾ ಪೊಲೀಸ್ ಠಾಣೆ ವ್ಯಾಪ್ತಿಯ ಬಸಂತ್ ಕುಂಜ್ ಸೆಕ್ಟರ್ ಎಚ್ ನಲ್ಲಿ ಈ ಘಟನೆ ನಡೆದಿದೆ.
ಬಾಲಕಿಯನ್ನು ತಳ್ಳಿದ ಆರೋಪದ ಮೇಲೆ ಲಖನೌ ಪೊಲೀಸರು ಸುಫಿಯಾನ್(21) ಎಂಬ ಯುವಕನ ವಿರುದ್ಧ ಕೊಲೆಗೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಮತ್ತು ಉತ್ತರ ಪ್ರದೇಶ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಯ ಶೋಧಕ್ಕಾಗಿ ನಾಲ್ಕು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಈ ಯುವಕ ಕಳೆದ ಒಂದೂವರೆ ವರ್ಷಗಳಿಂದ ಮೃತ ಬಾಲಕಿಯೊಂದಿಗೆ ಸ್ನೇಹ ಬೆಳೆಸಲು ಯತ್ನಿಸುತ್ತಿದ್ದ ಎಂದು ಜಂಟಿ ಪೊಲೀಸ್ ಆಯುಕ್ತ ಮೊರ್ಡಿಯಾ ಅವರು ಬುಧವಾರ ತಿಳಿಸಿದ್ದಾರೆ.
ಯುವತಿಗೆ ತನ್ನನ್ನು ಮದುವೆಯಾಗುವಂತೆ ಮತ್ತು ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದಾನೆ. ಇದಕ್ಕೆ ನಿರಾಕರಿಸಿದಾಗ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಯುವಕ ಬಾಲಕಿಯನ್ನು ತಳ್ಳಿದ್ದಾನೆ ಎಂದು ಮೊರ್ಡಿಯಾ ಹೇಳಿದ್ದಾರೆ.
ಇದಲ್ಲದೆ, ಈ ಪ್ರಕರಣದಲ್ಲಿ ಅರೆಕಾಲಿಕ ಪೇಂಟರ್ ಆಗಿದ್ದ ಆರೋಪಿ ಸುಫಿಯಾನ್ ಕುಟುಂಬದ ಪಾತ್ರವನ್ನು ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.
ಮೃತ ಬಾಲಕಿ ನಿಧಿ ಗುಪ್ತಾ ತನ್ನ ಕುಟುಂಬದೊಂದಿಗೆ ಅದೇ ವಸತಿ ಕಟ್ಟಡದಲ್ಲಿ ವಾಸಿಸುತ್ತಿದ್ದಳು. ಬ್ಯೂಟಿಷಿಯನ್ ಕೋರ್ಸ್ ಮಾಡುತ್ತಿದ್ದಳು. ಸುಫಿಯಾನ್ ಬಾಲಕಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


