ಮಿಜೋರಾಂ ಕಲ್ಲು ಕ್ವಾರಿ ಕುಸಿತ: ಮೃತರ ಸಂಖ್ಯೆ 10ಕ್ಕೆ ಏರಿಕೆ, ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ
ಮಿಜೋರಾಂನ ಕಲ್ಲು ಕ್ವಾರಿ ಕುಸಿತದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಗಳಿಗೆ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಘೋಷಿಸಿದ್ದಾರೆ.

ಐಜ್ವಾಲ್: ಮಿಜೋರಾಂನ ಕಲ್ಲು ಕ್ವಾರಿ ಕುಸಿತದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಗಳಿಗೆ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಘೋಷಿಸಿದ್ದಾರೆ.
ದಕ್ಷಿಣ ಮಿಜೋರಾಂನ ನಾಥಿಯಾಲ್ ಜಿಲ್ಲೆಯ ಕಲ್ಲು ಕ್ವಾರಿ ಕುಸಿತ ಘಟನೆಯಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಸ್ಥಳದಿಂದ ಇನ್ನೆರಡು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಮಿಜೋರಾಂನ ಕಲ್ಲು ಕ್ವಾರಿ ಕುಸಿತದ ದುರಂತದಿಂದ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಬಗ್ಗೆ ನನ್ನ ಸಂತಾಪಗಳು. ಪಿಎಂಎನ್ಆರ್ಎಫ್ನಿಂದ ಪ್ರತಿ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50,000 ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಮೃತಪಟ್ಟವರಲ್ಲಿ ಐವರು ಪಶ್ಚಿಮ ಬಂಗಾಳದವರು, ಜಾರ್ಖಂಡ್ ಮತ್ತು ನೆರೆಯ ಅಸ್ಸಾಂನ ಇಬ್ಬರು ಹಾಗೂ ಒಬ್ಬರು ಮಿಜೋರಾಂನ ಲುಂಗ್ಲೈ ಜಿಲ್ಲೆಯವರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


