ಕಪ್ಪುಹಣ, ಉಗ್ರರಿಗೆ ಆರ್ಥಿಕ ನೆರವು ತಡೆಯಲು ನೋಟ್ ಬ್ಯಾನ್: ಸುಪ್ರೀಂಗೆ ಕೇಂದ್ರದ ಅಫಿಡವಿಟ್
2016ರ ನೋಟು ಅಮಾನ್ಯೀಕರಣವು ಒಂದು "ಉತ್ತಮ" ನಿರ್ಧಾರವಾಗಿದೆ ಮತ್ತು ನಕಲಿ ಹಣ, ಭಯೋತ್ಪಾದಕರಿಗೆ ಹಣಕಾಸು ನೆರವು, ಕಪ್ಪು ಹಣ ಮತ್ತು ತೆರಿಗೆ ವಂಚನೆಗಳ ವಿರುದ್ಧ ಹೋರಾಡುವ ದೊಡ್ಡ ಕಾರ್ಯತಂತ್ರದ ಭಾಗವಾಗಿದೆ...

ನವದೆಹಲಿ: 2016ರ ನೋಟು ಅಮಾನ್ಯೀಕರಣವು ಒಂದು "ಉತ್ತಮ" ನಿರ್ಧಾರವಾಗಿದೆ ಮತ್ತು ನಕಲಿ ಹಣ, ಭಯೋತ್ಪಾದಕರಿಗೆ ಹಣಕಾಸು ನೆರವು, ಕಪ್ಪು ಹಣ ಮತ್ತು ತೆರಿಗೆ ವಂಚನೆಗಳ ವಿರುದ್ಧ ಹೋರಾಡುವ ದೊಡ್ಡ ಕಾರ್ಯತಂತ್ರದ ಭಾಗವಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
500 ಮತ್ತು 1000 ರೂಪಾಯಿ ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸಿದ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ, ಭಾರತೀಯ ರಿಸರ್ವ್ ಬ್ಯಾಂಕ್‌ನೊಂದಿಗೆ ವ್ಯಾಪಕವಾದ ಸಮಾಲೋಚನೆಯ ನಂತರ ಮತ್ತು ನೋಟು ನಿಷೇಧವನ್ನು ಜಾರಿಗೊಳಿಸುವ ಮೊದಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡ ನಂತರ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
2016 ರ ನೋಟು ಅಮಾನ್ಯೀಕರಣದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಹಲವು ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಇಂದು ಅಫಿಡವಿಟ್ ಸಲ್ಲಿಸಿದೆ.
ನ್ಯಾಯಮೂರ್ತಿಗಳಾದ ಎಸ್‌ಎ ನಜೀರ್, ಬಿಆರ್ ಗವಾಯಿ, ಎಎಸ್ ಬೋಪಣ್ಣ, ವಿ ರಾಮಸುಬ್ರಮಣಿಯನ್ ಮತ್ತು ಬಿವಿ ನಾಗರತ್ನ ಅವರನ್ನೊಳಗೊಂಡ ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠ ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ನವೆಂಬರ್ 24 ರಂದು ವಿಚಾರಣೆ ಕೈಗೆತ್ತಿಕೊಳ್ಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


