ಪಶ್ಚಿಮ ಬಂಗಾಳ: ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಇದ್ದಕ್ಕಿದ್ದಂತೆ ಅಸ್ವಸ್ಥ
ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದಾರೆಂದು ತಿಳಿದುಬಂದಿದೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದಾರೆಂದು ತಿಳಿದುಬಂದಿದೆ.
ಗಡ್ಕರಿ ಅವರು ಸಿಲಿಗುರಿಯ ಎನ್ಹೆಚ್10 ಉದ್ದಕ್ಕೂ ಉದ್ದೇಶಿತ 13 ಕಿಮೀ ನಾಲ್ಕು-ಲೇನ್ ಎಲಿವೇಟೆಡ್ ರಸ್ತೆಯ ನಿರ್ಮಾಣಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಗಡ್ಕರಿಯವರು ಅಸ್ವಸ್ಥರಾಗಿದ್ದಾರೆ. ಕೂಡಲೇ ಸ್ತಳಕ್ಕೆ ಬಂದ ವೈದ್ಯರು ಗಡ್ಕರಿಯವರ ಆರೋಗ್ಯ ಪರಿಶೀಲನೆ ನಡೆಸಿದ್ದಾರೆ.
ಗಡ್ಕರಿಯವರ ರಕ್ತದಲ್ಲಿನ ಸಕ್ಕರೆ ಅಂಶದಲ್ಲಿನ ಹಠಾತ್ ಕುಸಿತವಾದ ಹಿನ್ನೆಲೆಯಲ್ಲಿ ಕೇಂದ್ರ ಸಚಿವರ ಆರೋಗ್ಯದಲ್ಲಿ ಏರುಪೇರು ಕಂಡಿ ಬಂದಿತ್ತು. ವೈದ್ಯರು ಅವರಿಗೆ ಚಿಕಿತ್ಸೆ ನೀಡಿದರು ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


