ಪ್ರಚಾರದ ಗೀಳು: ಗುಜರಾತ್ ಚುನಾವಣೆಯ ಸಾಮಾನ್ಯ ವೀಕ್ಷಕನನ್ನು ವಜಾಗೊಳಿಸಿದ ಚುನಾವಣಾ ಆಯೋಗ
ಅಹಮದಾಬಾದ್ ನ ಬಾಪುನಗರ ಮತ್ತು ಅಸರ್ವಾ ಎರಡು ಕ್ಷೇತ್ರಗಳಿಗೆ ಸಾಮಾನ್ಯ ವೀಕ್ಷಕರಾಗಿ ನೇಮಕಗೊಂಡಿದ್ದ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಅವರು ಇತ್ತೀಚೆಗೆ ತಮ್ಮ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ...

ಗಾಂಧಿನಗರ: ಅಹಮದಾಬಾದ್ ನ ಬಾಪುನಗರ ಮತ್ತು ಅಸರ್ವಾ ಎರಡು ಕ್ಷೇತ್ರಗಳಿಗೆ ಸಾಮಾನ್ಯ ವೀಕ್ಷಕರಾಗಿ ನೇಮಕಗೊಂಡಿದ್ದ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಅವರು ಇತ್ತೀಚೆಗೆ ತಮ್ಮ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಅವರನ್ನು ಚುನಾವಣಾ ಕರ್ತವ್ಯದಿಂದ ತೆಗೆದುಹಾಕಿದೆ.
ಸಿಂಗ್ ಅವರ ಬದಲಿಗೆ ಸಾಮಾನ್ಯ ವೀಕ್ಷಕರನ್ನು ನೇಮಿಸುವವರೆಗೆ ಈ ಎರಡು ಕ್ಷೇತ್ರಗಳ ಉಸ್ತುವಾರಿಯನ್ನು ಐಎಎಸ್ ಅಧಿಕಾರಿ ಕ್ರಿಶನ್ ಬಾಜ್‌ಪೇಯ್ ಅವರಿಗೆ ನೀಡಲಾಗಿದೆ. ಕ್ರಿಶನ್ ಅವರು ಇತರ ಹತ್ತಿರದ ಕ್ಷೇತ್ರಗಳಿಗೆ ಸಾಮಾನ್ಯ ವೀಕ್ಷಕರಾಗಿ ನೇಮಕಗೊಂಡಿದ್ದಾರೆ.
"ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಭಿಷೇಕ್ ಸಿಂಗ್ ಅವರನ್ನು ತೆಗೆದುಹಾಕಲಾಗಿದೆ ಮತ್ತು ಸಾಮಾನ್ಯ ವೀಕ್ಷಕರನ್ನು ನೇಮಿಸುವವರೆಗೆ ಕ್ರಿಶನ್ ಬಾಜ್‌ಪೇಯ್ ಅವರಿಗೆ ಉಸ್ತುವಾರಿ ನೀಡಲಾಗಿದೆ" ಎಂದು ಜಂಟಿ ಮುಖ್ಯ ಚುನಾವಣಾಧಿಕಾರಿ ಅಜಯ್ ಭಟ್ ಅವರು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ, ಸಿಂಗ್ ಅವರು ಅಧಿಕೃತ ವಾಹನದ ಪಕ್ಕದಲ್ಲಿ ನಿಂತಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ವಾಹನದ ಮುಂಭಾಗದಲ್ಲಿ "ಭಾರತೀಯ ಚುನಾವಣಾ ಆಯೋಗದ ವೀಕ್ಷಕ" ಎಂದು ಬರೆಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


