ಚುನಾವಣಾ ಆಯುಕ್ತರಾಗಿ ಅರುಣ್ ಗೋಯಲ್ ನೇಮಕ
ಶುಕ್ರವಾರವಷ್ಟೇ ಸ್ವಯಂ ನಿವೃತ್ತಿ ಪಡೆದ ಪಂಜಾಬ್ ಕೇಡರ್‌ನ 1985 ಬ್ಯಾಚ್‌ನ ಐಎಎಸ್ ಅಧಿಕಾರಿ ಅರುಣ್ ಗೋಯಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.

ನವದೆಹಲಿ: ಶುಕ್ರವಾರವಷ್ಟೇ ಸ್ವಯಂ ನಿವೃತ್ತಿ ಪಡೆದ ಪಂಜಾಬ್ ಕೇಡರ್‌ನ 1985 ಬ್ಯಾಚ್‌ನ ಐಎಎಸ್ ಅಧಿಕಾರಿ ಅರುಣ್ ಗೋಯೆಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.
ಇದೇ ವರ್ಷ ಡಿಸೆಂಬರ್ 31ಕ್ಕೆ ಅವರು ನಿವೃತ್ತಿಯಾಗಬೇಕಿತ್ತು. ಈ ಹೊಸ ಜವಾಬ್ದಾರಿಯನ್ನು ತೆಗೆದುಕೊಂಡರೆ, ಹಾಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ 2025ರಲ್ಲಿ ಅಧಿಕಾರದಿಂದ ನಿರ್ಗಮಿಸಿದ ನಂತರ ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗುತ್ತಾರೆ. ಚುನಾವಣಾ ಸಮಿತಿಯಲ್ಲಿ ಸಿಇಸಿ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನೂಪ್ ಚಂದ್ರ ಪಾಂಡೆ ಅವರೊಂದಿಗೆ ಅರುಣ್ ಗೋಯೆಲ್ ಸೇರಲಿದ್ದಾರೆ.
ಸಿಇಸಿಯಾಗಿದ್ದ ಸುಶೀಲ್ ಚಂದ್ರ ಈ ವರ್ಷ ಮೇ ನಲ್ಲಿ ನಿವೃತ್ತಿಯಾದ ನಂತರ ಈ ಹುದ್ದೆ ಖಾಲಿಯಿತ್ತು. ಭಾರೀ ಉದ್ಯಮಗಳ ಕಾರ್ಯದರ್ಶಿಯಾಗಿದ್ದ ಗೋಯೆಲ್ ಶುಕ್ರವಾರವಷ್ಟೇ ಸ್ವಯಂ ನಿವೃತ್ತಿ ಪಡೆದರು. ಅವರು ಕೇಂದ್ರ ಸಂಸ್ಕೃತಿ ಸಚಿವಾಲಯದಲ್ಲಿಯೂ ಸೇವೆ ಸಲ್ಲಿಸಿದ್ದಾರೆ. ಗೋಯೆಲ್ ಅವರು ಡಿಸೆಂಬರ್ 2027 ರವರೆಗೆ ಅಧಿಕಾರದಲ್ಲಿರುತ್ತಾರೆ.
ಗುಜರಾತ್ ಚುನಾವಣೆಗೆ ಕೆಲವು ದಿನಗಳಿರುವಂತೆಯೇ ಗೋಯೆಲ್ ಅವರ ನೇಮಕವಾಗಿದೆ. ಮುಂಬರುವ ತಿಂಗಳುಗಳಲ್ಲಿ ನಾಗಾಲ್ಯಾಂಡ್, ಮೇಘಾಲಯ, ತ್ರಿಪುರಾ ಮತ್ತು ಕರ್ನಾಟಕಕ್ಕೆ ಚುನಾವಣಾ ವೇಳಾಪಟ್ಟಿಯನ್ನು ನಿರ್ಧರಿಸುವಾಗ ಚುನಾವಣಾ ಸಮಿತಿಯು ತನ್ನ ಸಂಪೂರ್ಣ ಶಕ್ತಿಯನ್ನು ಹೊಂದಿರುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


