ಕೇರಳ: ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿ; 20 ಮಂದಿಗೆ ಗಾಯ, 8 ವರ್ಷದ ಬಾಲಕ ಸೇರಿ ಮೂವರ ಸ್ಥಿತಿ ಗಂಭೀರ
ಆಂಧ್ರಪ್ರದೇಶದಿಂದ ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಬಾಲಕ ಸೇರಿದಂತೆ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ ಜಿಲ್ಲೆಯ ಲಾಹಾ ಬಳಿ ನಡೆದಿದೆ.

ಪತ್ತನಂತಿಟ್ಟ: ಆಂಧ್ರಪ್ರದೇಶದಿಂದ ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಬಾಲಕ ಸೇರಿದಂತೆ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ ಜಿಲ್ಲೆಯ ಲಾಹಾ ಬಳಿ ನಡೆದಿದೆ.
ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ 44 ಯಾತ್ರಾರ್ಥಿಗಳನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡ 8 ವರ್ಷದ ಬಾಲಕ ಸೇರಿದಂತೆ ಮೂವರನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದ್ದು, 18 ಮಂದಿಯನ್ನು ಇಲ್ಲಿನ ಜನರಲ್ ಆಸ್ಪತ್ರೆಗೆ ಮತ್ತು ಉಳಿದವರನ್ನು ಸಮೀಪದ ಪೆರಿನಾಡು ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ, ಮೋಟಾರು ವಾಹನ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯರು ಜಂಟಿಯಾಗಿ ಕ್ಷಿಪ್ರ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರಿಂದ ಅಪಘಾತದ ತೀವ್ರತೆ ಕಡಿಮೆಯಾಗಿದೆ.
ಸ್ಥಳಕ್ಕಾಗಮಿಸಿದ ಆರೋಗ್ಯ ಸಚಿವೆ ವೀಣಾ ಜಾರ್ಜ್, ರಕ್ಷಣಾ ಕಾರ್ಯಾಚರಣೆ ಹಾಗೂ ಯಾತ್ರಾರ್ಥಿಗಳ ಹೆಚ್ಚಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಿದರು. ಬಳಿಕ ಮಾತನಾಡಿದ ಅವರು, ಗಾಯಗೊಂಡ ಎಲ್ಲರಿಗೂ ಅಗತ್ಯ ಚಿಕಿತ್ಸೆ ನೀಡಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


