ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನದ ಒಳ ನುಸುಳುಕೋರನ ಹೊಡೆದುರುಳಿಸಿದ ಸೇನೆ!
ಭಾರತ-ಪಾಕಿಸ್ತಾನದ ಗಡಿ ಪ್ರದೇಶ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಒಳನುಸುಳುಕೋರನೋರ್ವನನ್ನು ಶನಿವಾರ ಹೊಡೆದುರುಳಿಸಿದೆ.

ಶ್ರೀನಗರ: ಭಾರತ-ಪಾಕಿಸ್ತಾನದ ಗಡಿ ಪ್ರದೇಶ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಒಳನುಸುಳುಕೋರನೋರ್ವನನ್ನು ಶನಿವಾರ ಹೊಡೆದುರುಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ಶಂಕಿತ ಭಯೋತ್ಪಾದಕರ ಒಳನುಸುಳುವಿಕೆ ಯತ್ನವನ್ನು ಸೇನೆ ವಿಫಲಗೊಳಿಸಿದೆ. ಶನಿವಾರ ಪಾಕಿಸ್ತಾನದ ಒಳನುಸುಳುಕೋರನನ್ನು ಸೇನೆ ಹೊಡೆದುರುಳಿಸಿದ್ದು, ಇಡೀ ಪ್ರದೇಶವನ್ನು ಇದೀಗ ಸೇನೆ ಸುತ್ತುವರೆದಿದೆ ಎನ್ನಲಾಗಿದೆ.
ಈ ಬಗ್ಗೆ ಸೇನಾಧಿಕಾರಿಗಳು ಮಾಹಿತಿ ನೀಡಿದ್ದು, ನೌಶೇರಾ ಸೆಕ್ಟರ್‌ನ ಕಲಾಲ್ ಪ್ರದೇಶದಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ಸೇನೆ ತಡೆದಿದೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಒಳನುಸುಳುಕೋರನನ್ನು ಸೇನೆ ಹೊಡೆದುರುಳಿಸಿದೆ. ಇಡೀ ಪ್ರದೇಶವನ್ನು ಸೇನೆ ಸುತ್ತುವರೆದಿದ್ದು ಶೋಧ ಕಾರ್ಯ ಆರಂಭಿಸಿದೆ ಎಂದು ಹೇಳಿದ್ದಾರೆ.
ಎಲ್ಒಸಿಯ ನೌಶೇರಾ ಸೆಕ್ಟರ್ ನಲ್ಲಿ ಇತ್ತೀಚಿನ ದಿನಗಳಲ್ಲಿ ಒಳ ನುಸುಳುವಿಕೆ ಚಟುವಟಿಕೆ ತೀವ್ರವಾಗಿದ್ದು, ಇದೇ ಕಾರಣತ್ತೆ ನೌಶೇರಾ ಸೇರಿದಂತೆ ಸೂಕ್ಷ್ಮ ಗಡಿ ಪ್ರದೇಶಗಳಲ್ಲಿ ಭಾರತೀಯ ಸೇನೆ ತನ್ನ ಗಸ್ತು ತೀವ್ರಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


