ಪುಣೆ- ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: 48 ವಾಹನಗಳು ಜಖಂ
ಪುಣೆ- ಬೆಂಗಳೂರು ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಪುಣೆ ಬೆಂಗಳೂರು ಹೆದ್ದಾರಿಯ ನವಲೆ ಸೇತುವೆಯ ಬಳಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ 48 ವಾಹನಗಳು ಜಖಂಗೊಂಡಿದೆ.

ಪುಣೆ: ಪುಣೆ- ಬೆಂಗಳೂರು ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಪುಣೆ ಬೆಂಗಳೂರು ಹೆದ್ದಾರಿಯ ನವಲೆ ಸೇತುವೆಯ ಬಳಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ 48 ವಾಹನಗಳು ಜಖಂಗೊಂಡಿದೆ.
ಪುಣೆಯ ಅಗ್ನಿಶಾಮಕ ದಳ ಹಾಗೂ ಪುಣೆ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸ್ಥಳಕ್ಕೆ ತಲುಪಿದೆ ಎಂದು ಪುಣೆ ಅಗ್ನಿಶಾಮಕ ದಳ ತಿಳಿಸಿದೆ. ಟ್ಯಾಂಕರ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಅಪಘಾತಕ್ಕೀಡಾದ ವಾಹನಗಳನ್ನು ಪಕ್ಕಕ್ಕೆ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಅಪಘಾತದಲ್ಲಿ ಒಟ್ಟು 48 ವಾಹನಗಳಿಗೆ ಹಾನಿಯಾಗಿರುವ ಬಗ್ಗೆ ಮಾಹಿತಿ ಇದೆ. ಅಪಘಾತ ಅಥವಾ ಅಪಘಾತದಲ್ಲಿ ಇದುವರೆಗೆ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


