ದೇಶ

ಎಂಸಿಡಿ ಚುನಾವಣೆಗೂ ಮುನ್ನ ಕಾಂಗ್ರೆಸ್ ಮಾಜಿ ಸಂಸದ ಮಹಾಬಲ್ ಮಿಶ್ರಾ ಎಎಪಿ ಸೇರ್ಪಡೆ

ಕಾಂಗ್ರೆಸ್ ಮಾಜಿ ಸಂಸದ ಮಹಾಬಲ್ ಮಿಶ್ರಾ ಅವರು ಭಾನುವಾರ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು.

ಎಂಸಿಡಿ ಚುನಾವಣೆಗೂ ಮುನ್ನ ಕಾಂಗ್ರೆಸ್ ಮಾಜಿ ಸಂಸದ ಮಹಾಬಲ್ ಮಿಶ್ರಾ ಎಎಪಿ ಸೇರ್ಪಡೆ
ಮಹಾಬಲ್ ಮಿಶ್ರಾ ಎಎಪಿ ಸೇರ್ಪಡೆ
Published On :

ನವದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಮಾಜಿ ಸಂಸದ ಮಹಾಬಲ್ ಮಿಶ್ರಾ ಅವರು ಭಾನುವಾರ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು.

ಮಿಶ್ರಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಕೇಜ್ರಿವಾಲ್, "ದೆಹಲಿಯ ಪೂರ್ವಾಂಚಲ ಸಮುದಾಯದ ಜನಪ್ರಿಯ ನಾಯಕರಾಗಿರುವ ಮಹಾಬಲ್ ಮಿಶ್ರಾ ಅವರು ಆಮ್ ಆದ್ಮಿ ಪಕ್ಷವನ್ನು ಸೇರಿದ್ದಾರೆ. ನಿಮ್ಮ ಅನುಭವದೊಂದಿಗೆ ನಾವೆಲ್ಲರೂ ಒಟ್ಟಾಗಿ ದೇಶ ಅಭಿವೃದ್ಧಿಗಾಗಿ ಕೆಲಸ ಮಾಡೋಣ" ಎಂದರು.

ಪಕ್ಷವನ್ನು ಬಲಪಡಿಸಲು ಕೆಲಸ ಮಾಡುವುದಾಗಿ ಎಎಪಿ ಸೇರ್ಪಡೆಯಾದ ನಂತರ ಸಾಮಾಜಿಕ ಮಾಧ್ಯಮದ ಮೂಲಕ ಮಿಶ್ರಾ ಹೇಳಿದ್ದಾರೆ.

ಪಶ್ಚಿಮ ದೆಹಲಿಯ ಮಾಜಿ ಲೋಕಸಭಾ ಸಂಸದ ಮತ್ತು ದ್ವಾರಕಾ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿರುವ ಮಿಶ್ರಾ ಅವರನ್ನು 2020 ರಲ್ಲಿ ದೆಹಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ "ಪಕ್ಷ ವಿರೋಧಿ ಚಟುವಟಿಕೆಗಾಗಿ" ಕಾಂಗ್ರೆಸ್‌ನಿಂದ ಅಮಾನತುಗೊಳಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.